ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಚಿಟ್ಟ ಅಧ್ಯಾಯದ ಪುನರಾರಂಭ

Last Updated 20 ಫೆಬ್ರುವರಿ 2023, 22:00 IST
ಅಕ್ಷರ ಗಾತ್ರ

2017ರಲ್ಲಿ ತೆರೆಕಂಡ ‘ಮಫ್ತಿ’ ಚಿತ್ರ ಸೆಂಚುರಿ ಸ್ಟಾರ್‌ ಶಿವರಾಜ್‌ಕುಮಾರ್‌ ಅವರಿಗೆ ಹೊಸದೊಂದು ಗುರುತು ತಂದುಕೊಟ್ಟಿತ್ತು. ನರ್ತನ್‌ ಆ್ಯಕ್ಷನ್‌ ಕಟ್‌ ಹೇಳಿದ್ದ ಈ ಚಿತ್ರದಲ್ಲಿನ ಅವರ ‘ಭೈರತಿ ರಣಗಲ್‌’ ಪಾತ್ರ ಸಂಚಲನ ಸೃಷ್ಟಿಸಿತ್ತು. ಇದೀಗ ಈ ಪಾತ್ರದ ಹೆಸರೇ ಸಿನಿಮಾವಾಗಿ ತೆರೆಗೆ ಬರುತ್ತಿದೆ.

ಶಿವರಾಜ್‌ಕುಮಾರ್‌–ನರ್ತನ್‌ ಕಾಂಬಿನೇಷನ್‌ನಲ್ಲಿ ಶೀಘ್ರದಲ್ಲೇ ‘ಭೈರತಿ ರಣಗಲ್‌’ ಸಿನಿಮಾ ಚಿತ್ರೀಕರಣ ಆರಂಭವಾಗಲಿದೆ. ಎಲ್ಲವೂ ಅಂದುಕೊಂಡಿದ್ದಂತೆ ಆಗಿದ್ದಲ್ಲಿ ಶಿವರಾಜ್‌ಕುಮಾರ್‌ ಅವರ 125ನೇ ಸಿನಿಮಾ ಇದಾಗಬೇಕಿತ್ತು. ಆದರೆ ಕಾರಣಾಂತರಗಳಿಂದ ಪ್ರಾಜೆಕ್ಟ್‌ ಆರಂಭಗೊಂಡಿರಲಿಲ್ಲ. ಶಿವರಾತ್ರಿಯಂದು ಸಿನಿಮಾದ ಫಸ್ಟ್‌ಲುಕ್‌ ಬಿಡುಗಡೆಯಾಗಿದೆ. ‘ವೇದ’ ಸಿನಿಮಾ ಮೂಲಕ ಚಿತ್ರ ನಿರ್ಮಾಣ ಕ್ಷೇತ್ರಕ್ಕೆ ಇಳಿದಿದ್ದ ಗೀತಾ ಶಿವರಾಜ್‌ಕುಮಾರ್‌ ತಮ್ಮ ಗೀತಾ ಪಿಕ್ಚರ್ಸ್‌ ಲಾಂಛನದಡಿ ‘ಭೈರತಿ ರಣಗಲ್‌’ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾ ‘ಮಫ್ತಿ’ ಚಿತ್ರದ ಪ್ರೀಕ್ವೆಲ್‌(ಹಿಂದಿನ ಕಥೆ) ಎನ್ನುವ ಮಾಹಿತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT