ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಭೈರವನ ಕೊನೆ ಪಾಠ’ದಲ್ಲಿ ಶಿವರಾಜ್‌ಕುಮಾರ್

Published 5 ಜುಲೈ 2024, 0:33 IST
Last Updated 5 ಜುಲೈ 2024, 0:33 IST
ಅಕ್ಷರ ಗಾತ್ರ
‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ಬಳಿಕ ನಿರ್ದೇಶಕ ಹೇಮಂತ್ ಎಂ ರಾವ್, ಶಿವರಾಜ್‌ಕುಮಾರ್‌ಗೆ ಮುಂದಿನ ಚಿತ್ರ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಚಿತ್ರಕ್ಕೆ ‘ಭೈರವನ ಕೊನೆ ಪಾಠ’ ಎಂದು ಹೆಸರಿಡಲಾಗಿದೆ.

ಡಾ.ವೈಶಾಖ್ ಜೆ ಗೌಡ ತಮ್ಮ ವಿಜೆಎಫ್ ಪ್ರೊಡಕ್ಷನ್ ಹೌಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ‘ನಮ್ಮ ಆಡುಭಾಷೆಗೆ ಹತ್ತಿರವಾದ ಶೀರ್ಷಿಕೆಗಳು ನನಗೆ ಇಷ್ಟವಾಗುತ್ತವೆ. ಕನ್ನಡದಲ್ಲಿ ಹಿಂದೆ ಶೀರ್ಷಿಕೆಗಳು ಕೇಳಲಿಕ್ಕೂ ಮಧುರವಾಗಿದ್ದು ಕುತೂಹಲ ಕೆರಳಿಸುವಂತೆ ಇರುತ್ತಿದ್ದವು. ನನ್ನ ನಿರ್ದೇಶನದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಕವಲುದಾರಿ’, ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಶೀರ್ಷಿಕೆಗಳು ಸಾಕಷ್ಟು ಜನ ಮೆಚ್ಚುಗೆಗೆ ಪಾತ್ರವಾದವು. ‘ಭೈರವನ ಕೊನೆ ಪಾಠ’ ಕೂಡ ಆ ಸಾಲಿಗೆ ಸೇರಲಿದೆ. ಕನ್ನಡ ಸಿನೆಮಾ ಜಗತ್ತಿನ ವಿಶಿಷ್ಟ ಶೀರ್ಷಿಕೆಗಳ ಪರಂಪರೆಯನ್ನು ಮುಂದಿನ ತಲೆಮಾರುಗಳಿಗೂ ತಲುಪಿಸುವ ಉದ್ದೇಶ ನಮ್ಮದು’ ಎಂದಿದ್ದಾರೆ ನಿರ್ದೇಶಕ ಹೇಮಂತ್‌ ರಾವ್‌.

‘ಆ್ಯಕ್ಷನ್‌ ಜೊತೆಗೆ ಹೇಮಂತ್‌ರಾವ್‌ ಶೈಲಿಯ ಕಥೆಯ ನಿರೂಪಣೆ ಇರಲಿದೆ. ಶಿವರಾಜ್‌ಕುಮಾರ್‌ ಭೈರವನಾಗಿ ಕಾಣಿಸಿಕೊಳ್ಳಲಿದ್ದಾರೆ’ ಎನ್ನುತ್ತಿದೆ ಚಿತ್ರತಂಡ. ಕನ್ನಡ, ತೆಲುಗು, ತಮಿಳು, ಮಲಯಾಳಂ ನಾಲ್ಕು ಭಾಷೆಗಳಲ್ಲಿ ಚಿತ್ರ ಮೂಡಿಬರುತ್ತಿದೆ. ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬಕ್ಕೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT