ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಇದೀಗ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.
ನವೆಂಬರ್ 15ರಂದು ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಯಾಗುವುದಾಗಿ ಚಿತ್ರತಂಡ ಘೋಷಿಸಿದೆ.
‘ಭೈರತಿ ರಣಗಲ್’ ಚಿತ್ರವು ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿದೆ. ಈ ಸಿನಿಮಾವನ್ನು ಗೀತಾ ಶಿವರಾಜ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ನರ್ತನ್ ನಿರ್ದೇಶನದ ಈ ಚಿತ್ರದಲ್ಲಿ ರುಕ್ಮಿಣಿ ವಸಂತ್ ನಾಯಕಿಯಾಗಿ ನಟಿಸಿದ್ದಾರೆ.