ಶಿವರಾಜ್ಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ‘ಡ್ಯಾಡ್’ ಚಿತ್ರದ ಹೊಸ ಪೋಸ್ಟರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳದಲ್ಲಿ ಚಿತ್ರ ಸಿದ್ಧಗೊಳ್ಳುತ್ತಿದೆ.

‘ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ನಂದಿ ಬೆಟ್ಟಗಳಲ್ಲಿ ಚಿತ್ರೀಕರಣ ನಡೆದಿದೆ. ಶೀಘ್ರದಲ್ಲಿ ಮುಂದಿನ ಹಂತದ ಚಿತ್ರೀಕರಣ ಪ್ರಾರಂಭಿಸುತ್ತೇವೆ’ ಎಂದಿದೆ ಚಿತ್ರತಂಡ.

ಹರೀಶ್ ಪೆದ್ದಿ ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಿವರಾಜ್ಕುಮಾರ್ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳದ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಛಾಯಾಚಿತ್ರಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.