ಚಂದನವನದ ನಟ ‘ಹ್ಯಾಟ್ರಿಕ್ ಹೀರೋ’ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ದಾಂಪತ್ಯಕ್ಕೆ ಕಾಲಿಟ್ಟು 40 ವರ್ಷಗಳು ಕಳೆದಿವೆ. 40 ವರ್ಷದ ಸುದೀರ್ಘ ದಾಂಪತ್ಯ ಜೀವನದ ಸಂಭ್ರಮದಲ್ಲಿರುವ ಶಿವರಾಜ್ಕುಮಾರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

ಕನ್ನಡದ ಮೇರು ನಟರಾದ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಪುತ್ರ ಶಿವರಾಜ್ ಕುಮಾರ್ ಅವರು 1986 ರ ಮೇ 19 ರಂದು ಪತ್ನಿ ಗೀತಾ ಅವರ ಕೈಹಿಡಿದರು. ‘ಆನಂದ್’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ, ಶಿವರಾಜ್ ಕುಮಾರ್ ನಟನೆಯ ಚೊಚ್ಚಲ ಚಿತ್ರವೇ ಅಮೋಘ ಯಶಸ್ಸು ಕಂಡಿತ್ತು.

40 ವರ್ಷದ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ನಲವತ್ತು ಸಾಲದು, ನೂರು ಸಾಲದು, ಏಳು ಜನುಮವೂ ಸಾಲದು, ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು ಗೀತಾ’ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಅಭಿಮಾನಿಗಳು ಸೇರಿದಂತೆ ನಟ–ನಟಿಯರೂ ಕೂಡ ಶುಭಾಶಯ ಕೋರಿದ್ದಾರೆ.

ಇವರು ನಟಿಸಿದ ಮೊದಲ ಮೂರು ಚಿತ್ರಗಳಾದ ‘ಆನಂದ್‘, ‘ರಥ ಸಪ್ತಮಿ’ ಮತ್ತು ‘ಮನಮೆಚ್ಚಿದ ಹುಡುಗಿ’ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಾಣುವ ಮುಖೇನ 100 ದಿನಗಳಿಗೂ ಹೆಚ್ಚು ಪ್ರದರ್ಶನ ಕಂಡವು. ಇದೇ ಕಾರಣಕ್ಕಾಗಿ ಇವರಿಗೆ ‘ಹ್ಯಾಟ್ರಿಕ್ ಹಿರೋ’ ಎಂಬ ಬಿರುದು ಸಿಕ್ಕಿತು.

ಶಿವರಾಜ್ ಕುಮಾರ್ ಅವರು ತಮಿಳಿನ ಸೂಪರ್ ಹಿಟ್ ಚಿತ್ರಗಳಾದ ‘ಜೈಲರ್’ ಮತ್ತು ‘ಕ್ಯಾಪ್ಟನ್ ಮಿಲ್ಲರ್’ಗಳಲ್ಲಿ ಗಮನಾರ್ಹ ಪಾತ್ರಗಳಲ್ಲಿ ಕಾಣಿಸಿಕೊಂಡು ಅಭಿಮಾನಿಗಳಿಂದ ಮೆಚ್ಚುಗೆ ಪಡೆದುಕೊಂಡಿದ್ದಾರೆ.

ರಾಮ್ಚರಣ್ ನಟನೆಯ ‘ಪೆದ್ದಿ‘ ಸಿನಿಮಾದಲ್ಲೂ ಕಾಣಿಸಿಕೊಂಡಿರುವ ಶಿವರಾಜ್ ಕುಮಾರ್ ಅವರು ‘ಗೌರ್ನಾಯ್ಡು’ ಆಗಿ ಕಾಣಿಸಿಕೊಳ್ಳುತ್ತಿದ್ದು, ಗರಡಿಯ ಮುಖ್ಯಸ್ಥರಾಗಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.