ಬೆಂಗಳೂರು: ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿರುವ ನಟ ಶಿವರಾಜ್ ಕುಮಾರ್ ಅವರು ನಗರದ ಮಲ್ಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಭಾನುವಾರ ಮಧ್ಯರಾತ್ರಿಯೇ ಶಿವಣ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಜೊತೆ ಕುಟುಂಬದ ಸದಸ್ಯರು ಇದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ನಟ ವಿನಯ್ ರಾಜ್‌ಕುಮಾರ್ ತಮ್ಮ ಚಿಕ್ಕಪ್ಪನ ಆರೋಗ್ಯ ವಿಚಾರಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಸಂಜೆ ಶಿವರಾಜ್‍ಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆಂದು ಶಿವಣ್ಣ ಭರವಸೆ ನೀಡಿದ್ದರು ಎನ್ನಲಾಗಿತ್ತು.

ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿವಣ್ಣ ಜೆಡಿಎಸ್ ಪರ ಚುನಾವಣಾ ಪ್ರಚಾರ ನಡೆಸುವುದು ಅನುಮಾನ ಎಂದು ಮೂಲಗಳು ತಿಳಿಸಿವೆ.

ಮಧು ಬಂಗಾರಪ್ಪ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಮಂಗಳವಾರ ನಾಮಪತ್ರಸಲ್ಲಿಸಲಿದ್ದಾರೆ.

ಸೋಮವಾರ ಬೆಳಿಗ್ಗೆಶಿವರಾಜ್ ಕುಮಾರ್ ಅವರಮಗಳು ನಿವೇದಿತ, ನಟ ಪುನೀತ್ ರಾಜ್ ಕುಮಾರ್, ನಿರ್ದೇಶಕ ಪ್ರೇಮ್‌ಆಸ್ಪತ್ರೆಗೆಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಸಂಜೆ ವೇಳೆಗೆಆಸ್ಪತ್ರೆಯಿಂದಡಿಸ್ಚಾರ್ಜ್ ಆಗುವಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.