ನಟ ಶಿವರಾಜ್ಕುಮಾರ್ ಸಿನಿಪಯಣಕ್ಕೀಗ 40 ವರ್ಷ. 1986ರಲ್ಲಿ ‘ಆನಂದ್’ ಸಿನಿಮಾ ಮೂಲಕ ಚಂದನವನಕ್ಕೆ ಹೆಜ್ಜೆ ಇಟ್ಟ ಸೆಂಚುರಿ ಸ್ಟಾರ್ ಕೈಯಲ್ಲೀಗ ಸಾಲು ಸಾಲು ಪ್ರಾಜೆಕ್ಟ್ಗಳಿವೆ. ವರ್ಷಕ್ಕೊಂದು ಸಿನಿಮಾ ನೀಡುತ್ತಿರುವ ಅವರು ಸದ್ಯ ಈ ವರ್ಷದ ಬಹುನಿರೀಕ್ಷಿತ ಸಿನಿಮಾ ‘45’ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ.

ಇತ್ತೀಚೆಗೆ ಚಿತ್ರದಲ್ಲಿನ ಅವರ ಪಾತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ‘ಚಿತ್ರೀಕರಣ ಪೂರ್ಣಗೊಂಡಿರುವ ‘45’ ಚಿತ್ರದ ಗ್ರಾಫಿಕ್ಸ್ ಕೆಲಸಗಳು ನಡೆಯುತ್ತಿದ್ದು, ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ಈ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ’ ಎಂದು ಚಿತ್ರತಂಡ ತಿಳಿಸಿದೆ.

ಶಿವರಾಜ್ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ.ಶೆಟ್ಟಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾವನ್ನು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶಿಸಿದ್ದಾರೆ. ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್’ ಬ್ಯಾನರ್ನಡಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಈ ಸಿನಿಮಾದ ಜೊತೆಗೆ ನಿರ್ದೇಶಕ ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸಿನಿಮಾದಲ್ಲಿ ಶಿವರಾಜ್ಕುಮಾರ್ ವಿಶೇಷ ಪಾತ್ರವೊಂದನ್ನು ಮಾಡುತ್ತಿದ್ದಾರೆ. ಶ್ರೀನಿ ನಿರ್ದೇಶನದ ‘ಎ ಫಾರ್ ಆನಂದ್’, ಕಾರ್ತಿಕ್ ಅದ್ವೈತ್ ಆ್ಯಕ್ಷನ್ ಕಟ್ ಹೇಳುತ್ತಿರುವ ‘#131’ ಸಿನಿಮಾ, ತಮಿಳಿನಲ್ಲಿ ರಜನಿಕಾಂತ್ ಜೊತೆಗೆ ‘ಜೈಲರ್ 2’, ತೆಲುಗಿನಲ್ಲಿ ರಾಮ್ಚರಣ್ ಜೊತೆಗೆ ‘ಪೆದ್ದಿ’ ಸಿನಿಮಾ ಶಿವರಾಜ್ಕುಮಾರ್ ಸಿನಿ ಬ್ಯಾಂಕ್ನಲ್ಲಿರುವ ಸಿನಿಮಾಗಳಾಗಿದ್ದು, ಇವುಗಳೂ ಬಿಡುಗಡೆಗೆ ಸಜ್ಜಾಗುತ್ತಿದೆ.

ಸಬ್ಇನ್ಸ್ಪೆಕ್ಟರ್ ಪಾತ್ರದಲ್ಲಿ ಶಿವರಾಜ್ಕುಮಾರ್

ಶ್ರಿತಿಕ್ ಮೋಷನ್ ಪಿಕ್ಚರ್ಸ್ನಡಿ ಶಿವರಾಜ್ಕುಮಾರ್ ಅವರ ಹೊಸ ಸಿನಿಮಾ ಘೋಷಣೆಯಾಗಿದೆ. ಸಾಗರ್ ಶಾ, ಕೃಷ್ಣಕುಮಾರ್ ಬಿ. ಮತ್ತು ಸೂರಜ್ ಶರ್ಮಾ ಇನ್ನೂ ಶೀರ್ಷಿಕೆ ಅಂತಿಮವಾಗದ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರವನ್ನು ಬಾಲಾಜಿ ಮಾಧವನ್ ನಿರ್ದೇಶನ ಮಾಡಲಿದ್ದು, ಚಿತ್ರಕ್ಕೆ ಕಥೆಯನ್ನು ಅವರೇ ಬರೆದಿದ್ದಾರೆ.

ಮರ್ಡರ್ ಮಿಸ್ಟ್ರಿ ಶೈಲಿಯ ಈ ಸಿನಿಮಾದಲ್ಲಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಪಾತ್ರದಲ್ಲಿ ಶಿವರಾಜ್ಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಶೀಘ್ರದಲ್ಲೇ ಚಿತ್ರದ ಮುಹೂರ್ತ ನಡೆಯಲಿದ್ದು, ಅಂದೇ ಶೀರ್ಷಿಕೆ ಘೋಷಣೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ. ಈ ವರ್ಷಾಂತ್ಯದಲ್ಲಿ ಚಿತ್ರೀಕರಣ ಪ್ರಾರಂಭಿಸುವ ಯೋಜನೆ ಹಾಕಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.