ಗುರುವಾರ , ಮಾರ್ಚ್ 23, 2023
23 °C

ನಟ ದರ್ಶನ್ ಮೇಲಿನ ಕೃತ್ಯ ಮನಸ್ಸಿಗೆ ನೋವುಂಟು ಮಾಡಿದೆ: ಶಿವರಾಜ್​ ಕುಮಾರ್

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ನಟ ಶಿವರಾಜ್ ಕುಮಾರ್ ವಿನಂತಿಸಿದ್ದಾರೆ.

ಭಾನುವಾರ ಕ್ರಾಂತಿ ಸಿನಿಮಾದ ಹಾಡು ಬಿಡುಗಡೆ ಸಮಾರಂಭದಲ್ಲಿ ನಟಿ ರಚಿತಾ ರಾಮ್ ಮಾತನಾಡುವಾಗ ಅವರ ಬಳಿ ನಿಂತಿದ್ದ‌ ನಟ ದರ್ಶನ್ ಮೇಲೆ ಜನರ ನಡುವಿನಿಂದ ವ್ಯಕ್ತಿಯೊಬ್ಬರು ಶೂ ಎಸೆದಿದ್ದರು.

ನಟರಾದ ಪ್ರೇಮ್, ಶರಣ್, ಲೂಸ್ ಮಾದ ಯೋಗಿ, ಅಭಿಷೇಕ್ ಅಂಬರೀಶ, ಪ್ರಜ್ವಲ್ ದೇವರಾಜ್ ಸೇರಿದಂತೆ ಸಾಕಷ್ಟು ನಟ ನಟಿಯರು ಈ ಘಟನೆಯನ್ನು ಖಂಡಿಸಿದ್ದರು.

‘ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ‘ ಎಂದು ನಟ ಶಿವರಾಜ್‌ಕುಮಾರ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು