ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲ್ಸನ್ ನಿರ್ದೇಶನದ ಹೊಸ ಚಿತ್ರದಲ್ಲಿ ರಜನಿಕಾಂತ್ –ಶಿವರಾಜ್‌ಕುಮಾರ್‌ ನಟನೆ? 

ಅಕ್ಷರ ಗಾತ್ರ

ಬೆಂಗಳೂರು: ನಿರ್ದೇಶಕ ನೆಲ್ಸನ್ ಆ್ಯಕ್ಷನ್ ಕಟ್ ಹೇಳಲಿರುವ ‘ತಲೈವರ್ 169’ ಹೊಸ ಸಿನಿಮಾದಲ್ಲಿ ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಅವರೊಂದಿಗೆ ಹ್ಯಾಟ್ರಿಕ್ ಹೀರೊ ಶಿವರಾಜ್‌ಕುಮಾರ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್‌’ ವರದಿ ಮಾಡಿದೆ.

ರಜನಿಕಾಂತ್ ಅಭಿನಯದ 169ನೇ ಚಿತ್ರವನ್ನು ನೆಲ್ಸನ್ ನಿರ್ದೇಶಿಸುವುದು ಪಕ್ಕಾ ಆಗಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಮೂಡಿಸಿದೆ.

ಹೆಸರಿಡದ ಈ ಚಿತ್ರವನ್ನು ಸನ್ ಪಿಕ್ಚರ್ಸ್‌ ನಿರ್ಮಾಣ ಮಾಡುತ್ತಿದ್ದು, ಆಗಸ್ಟ್‌ನಿಂದ ಚಿತ್ರೀಕರಣ ಆರಂಭವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಜನಿಕಾಂತ್ ಅವರೊಂದಿಗೆ ನಟಿಸುತ್ತಿರುವ ಬಗ್ಗೆ ಶಿವಣ್ಣ ಈವರೆಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ. ಆದರೆ, ನಿರ್ದೇಶಕ ನೆಲ್ಸನ್ ಶೀಘ್ರದಲ್ಲೇ ಬೆಂಗಳೂರಿಗೆ ಬರುವ ನಿರೀಕ್ಷೆಯಿದೆ. ಶಿವಣ್ಣನ ಜೊತೆ ಅವರು ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.

ರಜನಿಕಾಂತ್ ಅವರು ಕರ್ನಾಟಕದ ಜನರು ಮತ್ತು ಕನ್ನಡ ಚಿತ್ರರಂಗ ಸೇರಿದಂತೆ ವಿಶೇಷವಾಗಿ ಡಾ. ರಾಜ್‌ಕುಮಾರ್ ಕುಟುಂಬದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ನಿರ್ದೇಶಕ ಹರ್ಷ ಆ್ಯಕ್ಷನ್ ಕಟ್ ಹೇಳಿರುವ‘ವೇದಾ’ ಚಿತ್ರದಲ್ಲಿ ಶಿವಣ್ಣ ಬ್ಯುಸಿ ಆಗಿದ್ದಾರೆ.

ಶಿವಣ್ಣ ನಟನೆಯ‘ಬೈರಾಗಿ’ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಬಿಡುಗಡೆಗೆ ಸಜ್ಜಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT