ಶುಕ್ರವಾರ, ಡಿಸೆಂಬರ್ 9, 2022
22 °C

ಕ್ರಿಸ್‌ಮಸ್‌ಗೆ ಶಿವರಾಜ್‌ ಕುಮಾರ್‌ ನಟನೆಯ ವೇದಾ ತೆರೆಗೆ

ಪ್ರಜಾವಾಣಿ ವೆಬ್‌‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ನಟನೆಯ ‘ವೇದಾ’ ಚಿತ್ರದ ಮತ್ತೊಂದು ಪೋಸ್ಟರ್‌ ಇಂದು ಬಿಡುಗಡೆಗೊಂಡಿದೆ. ರಕ್ತಸಿಕ್ತವಾದ ಖಡಕ್‌ ಲುಕ್‌ನಲ್ಲಿ ಶಿವಣ್ಣ ಕಾಣಿಸಿಕೊಂಡಿದ್ದಾರೆ. ಪೋಸ್ಟರ್‌ ಅನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿರುವ ಶಿವಣ್ಣ, ಕ್ರಿಸ್‌ಮಸ್‌ಗೆ ಚಿತ್ರ ತೆರೆಗೆ ಬರಲಿದೆ ಎಂದಿದ್ದಾರೆ.

 

ಗೀತಾ ಪಿಕ್ಚರ್ಸ್‌ ಲಾಂಛನದಲ್ಲಿ ಮೂಡಿಬರುತ್ತಿರುವ ‘ವೇದಾ’ಸಿನಿಮಾ ಶಿವರಾಜ್‌ಕುಮಾರ್‌ ಅವರ 125ನೇ ಸಿನಿಮಾ. ಎ.ಹರ್ಷ ಹಾಗೂ ಶಿವರಾಜ್‌ಕುಮಾರ್‌ ಅವರ ಕಾಂಬಿನೇಷನ್‌ನ ನಾಲ್ಕನೇ ಸಿನಿಮಾವೂ ಇದಾಗಿದೆ.

ಶಿವರಾಜ್‌ ಕುಮಾರ್‌ ಹುಟ್ಟುಹಬ್ಬದಂದು ಚಿತ್ರದ ಟೀಸರ್‌ ಬಿಡುಗಡೆಗೊಳಿಸಲಾಗಿತ್ತು. ಶಿವಣ್ಣ ಹೋಂಬ್ಯಾನರ್‌ ಚಿತ್ರದ ಕುರಿತು ಅಭಿಮಾನಿಗಳಿಗೆ ಸಾಕಷ್ಟು ಕುತೂಹಲವಿದೆ. ಬಜರಂಗಿಯ ಹರ್ಷ, ಶಿವರಾಜ್‌ ಕುಮಾರ್‌ ಜೋಡಿಯ ಚಿತ್ರ ಮಾಸ್‌ ಎಂಟರ್‌ಟೈನರ್‌ ಎಂಬುದರಲ್ಲಿ ಅನುಮಾನವಿಲ್ಲ ಎನ್ನುತ್ತಿದೆ ಇಂದು ಬಿಡುಗಡೆಗೊಂಡ ಪೋಸ್ಟರ್‌.

ಈ ಚಿತ್ರಕ್ಕೆ ಜೀ ಸ್ಟುಡಿಯೋಸ್‌ ಕೈಜೋಡಿಸಿದೆ. ಗಾನವಿ ಚಿತ್ರದ ನಾಯಕಿ. ಅರ್ಜುನ್‌ ಜನ್ಯ ಸಂಗೀತ ಚಿತ್ರಕ್ಕಿದೆ. ಇನ್ನು ವೇದಾ ಚಿತ್ರವು 1960ರ ದಶಕದಲ್ಲಿ ನಡೆಯುವ ಕ್ರೂರ ಕಥಾ ಹಂದರ ಹೊಂದಿದೆ. ಚಿತ್ರದಲ್ಲಿ ಶಿವಣ್ಣನ ಮಗಳಾಗಿ ಅರುಣ್ ಸಾಗರ್ ಅವರ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮ್ರಾಶ್ರೀ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.