ಹಲವು ತಿಂಗಳ ಹಿಂದೆಯೇ ಶಿವರಾಜ್ಕುಮಾರ್ ಅವರಿಗೆ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಇದೀಗ ಆ ಸಿನಿಮಾದ ಫಸ್ಟ್ಲುಕ್ ಬಿಡುಗಡೆಯಾಗಿದ್ದು, ಶೀರ್ಷಿಕೆಯನ್ನೂ ಅನಾವರಣಗೊಳಿಸಲಾಗಿದೆ.

ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಶಿವರಾಜ್ಕುಮಾರ್ ಅವರ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ವೆಂಕಟ್ ಕೆ.ನಾರಾಯಣ್, ಶಿವರಾಜ್ಕುಮಾರ್ ಹಾಗೂ ಪವನ್ ಒಡೆಯರ್ ಕಾಂಬಿನೇಷನ್ನಲ್ಲಿ ಬರುತ್ತಿರುವ ಸಿನಿಮಾಗೆ ‘ಬೇಲ್’ ಎಂಬ ಶೀರ್ಷಿಕೆ ಇಡಲಾಗಿದೆ. ಕೆಂಬಣ್ಣದ ಹಿನ್ನೆಲೆಯಲ್ಲಿ ಮಳೆಯಲ್ಲಿ ಕೊಡೆ ಹಿಡಿದು ಶಿವರಾಜ್ಕುಮಾರ್ ನಿಂತಿರುವ ಪೋಸ್ಟರ್ ಕುತೂಹಲ ಮೂಡಿಸಿದೆ.

‘ಗೂಗ್ಲಿ’, ‘ರಣವಿಕ್ರಮ’, ‘ನಟಸಾರ್ವಭೌಮ’, ‘ರೇಮೋ’ ಸೇರಿದಂತೆ ಹಲವು ಹಿಟ್ಗಳನ್ನು ಕೊಟ್ಟಿರುವ ಪವನ್ ಮೊದಲ ಬಾರಿಗೆ ಶಿವರಾಜ್ಕುಮಾರ್ ಅವರಿಗೆ ನಿರ್ದೇಶನ ಮಾಡಲಿದ್ದಾರೆ. ‘ಇದು ನನಗೂ ಮತ್ತು ನಿರ್ಮಾಣ ಸಂಸ್ಥೆಗೂ ಅತ್ಯಂತ ವಿಶೇಷವಾದ ಸಿನಿಮಾ. ಶೀಘ್ರದಲ್ಲೇ ಟೀಸರ್ ಬಿಡುಗಡೆಗೊಳಿಸಲಿದ್ದೇವೆ. ಶಿವಣ್ಣ ಅವರೊಂದಿಗೆ ಕೆಲಸ ಮಾಡುವ ನನ್ನ ಕನಸು ನನಸಾಗಿದೆ. ಹಿಂದೆಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ಅವರನ್ನು ಪ್ರಸ್ತುತಪಡಿಸುತ್ತಿರುವುದು ನನಗೆ ಸಂತೋಷ’ ಎಂದಿದ್ದಾರೆ ಪವನ್.

ಸದ್ಯ ಕನ್ನಡದಲ್ಲಿ ಹೇಮಂತ್ ಎಂ.ರಾವ್ ನಿರ್ದೇಶನದ ‘666 ಆಪರೇಷನ್ ಡ್ರೀಮ್ ಥಿಯೇಟರ್’, ಶ್ರೀನಿ ನಿರ್ದೇಶನದ ‘ಎ ಫಾರ್ ಆನಂದ್’ ಹಾಗೂ ಪವನ್ ಒಡೆಯರ್ ನಿರ್ದೇಶನದ ‘ಬೇಲ್’ ಪ್ರಾಜೆಕ್ಟ್ಗಳು ಶಿವರಾಜ್ಕುಮಾರ್ ಅವರ ಕೈಯಲ್ಲಿದೆ.v

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.