ಶರತ್ ಚಕ್ರವರ್ತಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ, ನಟ ಶಿವರಾಜ್ ಕೆ.ಆರ್.ಪೇಟೆ ಮುಖ್ಯಭೂಮಿಕೆಯಲ್ಲಿರುವ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ.

ಈ ಸಿನಿಮಾದ ಶೀರ್ಷಿಕೆ ಇನ್ನಷ್ಟೇ ಘೋಷಣೆಯಾಗಬೇಕಿದ್ದು, ಲಲಿತಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣಗೊಂಡಿದೆ. ಚಿತ್ರತಂಡವು ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿದೆ.

ಹಳ್ಳಿಗಾಡಿನ ಸೊಗಡಿನ ಈ ಸಿನಿಮಾವನ್ನು ಬೆಂಗಳೂರು, ಹಾಸನ ಸುತ್ತಮುತ್ತಲ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಚಿತ್ರೀಕರಿಸಲಾಗಿದೆ. ನಿರೀಕ್ಷ ರಾವ್ ನಾಯಕಿಯಾಗಿರುವ ಈ ಚಿತ್ರದಲ್ಲಿ ಜಹಂಗೀರ್, ಬಲ ರಾಜವಾಡಿ ಸೇರಿದಂತೆ ಹಲವು ಕಲಾವಿದರಿದ್ದಾರೆ. ತಾಂತ್ರಿಕ ವರ್ಗದ ಮಾಹಿತಿಯನ್ನು ಮುಂದಿನ ಹಂತಗಳಲ್ಲಿ ಪರಿಚಯಿಸಲಾಗುವುದು ಎಂದಿದೆ ಚಿತ್ರತಂಡ. ಚಿತ್ರದ ಶೀರ್ಷಿಕೆಯನ್ನೂ ಸದ್ಯದಲ್ಲೇ ಅನಾವರಣಗೊಳಿಸಲಾಗುವುದು ಎಂದಿದ್ದಾರೆ ಶರತ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.