ಮಂಗಳವಾರ, ಸೆಪ್ಟೆಂಬರ್ 28, 2021
24 °C
ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್ 124ನೇ ಚಿತ್ರ

ಶಿವರಾಜ್‌ಕುಮಾರ್‌ ಹೊಸ ಚಿತ್ರದ ಚಿತ್ರೀಕರಣ ಜೂನ್‌ನಲ್ಲಿ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ಶಿವರಾಜ್‌ಕುಮಾರ್‌ ಅಭಿನಯಿಸುತ್ತಿರುವ 124ನೇ ಚಿತ್ರ ಜೂನ್‌ನಲ್ಲಿ ಸೆಟ್ಟೇರಲಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ರಾಮ್ ಧುಲಿಪುಡಿ ನಿರ್ದೇಶಿಸಲಿದ್ದಾರೆ.

ಚಿತ್ರದ ಹೆಸರು ಇನ್ನೂ ಅಂತಿಮಗೊಂಡಿಲ್ಲ. ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಜೂನ್ ಮೊದಲ ವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ. 70 ದಿನಗಳ ಕಾಲ ಚಿಕ್ಕಮಗಳೂರು, ಬೆಂಗಳೂರು, ಜಮ್ಮು ಹಾಗೂ ಕಾಶ್ಮೀರ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.

ಖ್ಯಾತ ನಟರಾದ ನಾಜರ್, ಸಂಪತ್ ಹಾಗೂ ಸಾಧುಕೋಕಿಲ ಸಹ ಈ ಚಿತ್ರದ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ತೆಲುಗು ಭಾಷೆಗೆ ಡಬ್‌ ಆದ ರಾಬರ್ಟ್‌ ಚಿತ್ರದಲ್ಲಿದ್ದ ಹಾಡಿನ ಮೂಲಕ ಖ್ಯಾತಿ ಪಡೆದ ಗಾಯಕಿ ಮಂಗ್ಲಿ ಅವರೂ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕುಡಿಪುಡಿ ವಿಜಯಕುಮಾರ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಈ ಚಿತ್ರಕ್ಕೆ ರವಿಕುಮಾರ್ ಸನಾ‌ ಅವರ ಛಾಯಾಗ್ರಹಣವಿದೆ. ‘ಟಗರು’ ಖ್ಯಾತಿಯ ಚರಣ್ ರಾಜ್ ಸಂಗೀತ ನಿರ್ದೇಶನ, ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರವಿ‌ ಸಂತೆಹಕ್ಲು ಕಲಾ ನಿರ್ದೇಶನ ಈ ಹೊಸ ಚಿತ್ರಕ್ಕಿದೆ.

ಈ ಚಿತ್ರದ ಬಳಿಕ ಶಿವರಾಜ್‌ಕುಮಾರ್‌ ಅಭಿನಯಿಸಲಿರುವ 125ನೇ ಚಿತ್ರ ‘ವೇದ’ ಸೆಟ್ಟೇರಲಿದೆ. ಈ ಚಿತ್ರಕ್ಕೆ ಎ.ಹರ್ಷ ನಿರ್ದೇಶನವಿದ್ದು, ಗೀತಾ ಶಿವರಾಜ್‌ಕುಮಾರ್‌ ನಿರ್ಮಾಪಕರಾಗಿರಲಿದ್ದಾರೆ. ಇದರ ಫಸ್ಟ್‌ಲುಕ್‌ ಈಗಾಗಲೇ ಬಿಡುಗಡೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು