ಸಿನಿಪಯಣದಲ್ಲಿ 40 ವರ್ಷ ಪೂರೈಸಿ ಹೆಜ್ಜೆ ಇಡುತ್ತಿರುವ ನಟ ಶಿವರಾಜ್ಕುಮಾರ್ ಸಿನಿಬ್ಯಾಂಕ್ ಹಿಗ್ಗುತ್ತಲೇ ಇದೆ. ಸದ್ಯ ಅರ್ಜುನ್ ಜನ್ಯ ನಟನೆಯ ‘45’ ಸಿನಿಮಾದ ಬಿಡುಗಡೆಗೆ ಎದುರು ನೋಡುತ್ತಿರುವ ಶಿವರಾಜ್ಕುಮಾರ್, ‘666 ಆಪರೇಷನ್ ಡ್ರೀಮ್ ಥಿಯೇಟರ್’, ‘ಎ ಫಾರ್ ಆನಂದ್’, ‘#131’, ‘ಜೈಲರ್ 2’, ‘ಪೆದ್ದಿ’ ಸಿನಿಮಾಗಳಲ್ಲೂ ನಟಿಸಿದ್ದಾರೆ. ಇದೀಗ ತೆಲುಗಿನ ನಿರ್ದೇಶಕ ಅನಿಲ್ ಕನ್ನೆಗಂಟಿ ನಿರ್ದೇಶನದ ‘ಡ್ಯಾಡ್’ನಲ್ಲಿ ವೈದ್ಯನಾಗಿ ಶಿವರಾಜ್ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.

ಈ ಚಿತ್ರದ ಮುಹೂರ್ತ ಇತ್ತೀಚೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ನಂದಿ ವಿಗ್ರಹ ಎದುರು ನಡೆಯಿತು. ನಿರ್ಮಾಪಕಿ ಗೀತಾ ಶಿವರಾಜ್ಕುಮಾರ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿದರು. ಸುಮಾರು 32 ವರ್ಷಗಳ ಹಿಂದೆ ‘ಜಗ ಮೆಚ್ಚಿದ ಹುಡುಗ’ ಚಿತ್ರವೂ ಇದೇ ನಂದಿ ವಿಗ್ರಹದ ಎದುರು ಶುರುವಾಗಿತ್ತು.

‘ಭಗವಂತ್ ಕೇಸರಿ’, ‘ಉಗ್ರಂ’, ‘ಟಕ್ ಜಗದೀಶ್’ ಮುಂತಾದ ತೆಲುಗು ಚಿತ್ರಗಳನ್ನು ನಿರ್ಮಿಸಿದ್ದ ಹರೀಶ್ ಪೆದ್ದಿ ಈ ಚಿತ್ರವನ್ನು ಮೈರಾ ಕ್ರಿಯೇಷನ್ಸ್ ಲಾಂಛನದಡಿ ನಿರ್ಮಿಸುತ್ತಿದ್ದಾರೆ. ತೆಲುಗಿನಲ್ಲಿ ‘ಅಸಾಧ್ಯುಡು’, ‘ಮಿಸ್ಟರ್ ನೂಕಯ್ಯ’ ಮತ್ತು ‘ಹಿಡಿಂಬ’ ಚಿತ್ರಗಳನ್ನು ನಿರ್ದೇಶಿಸಿರುವ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ಮಾಪಕ ಹಾಗೂ ನಿರ್ದೇಶಕರಿಗೆ ಇದು ಕನ್ನಡದ ಚೊಚ್ಚಲ ಸಿನಿಮಾ.

ತಂದೆ–ಮಗಳ ಭಾವನಾತ್ಮಕ ಚಿತ್ರ ಇದಾಗಿದ್ದು, ಥ್ರಿಲ್ಲಿಂಗ್ ಅಂಶಗಳೂ ಇವೆ ಎಂದು ಚಿತ್ರತಂಡ ತಿಳಿಸಿದೆ. ಈ ಹಿಂದೆ ‘ಗಡಿಬಿಡಿ ಕೃಷ್ಣ’ ಚಿತ್ರದಲ್ಲಿ ವೈದ್ಯರಾಗಿ ಕಾಣಿಸಿಕೊಂಡಿದ್ದ ಶಿವರಾಜ್ಕುಮಾರ್ ಸುಮಾರು 27 ವರ್ಷಗಳ ನಂತರ ವೈದ್ಯರಾಗಿ ಅಭಿನಯಿಸುತ್ತಿದ್ದಾರೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಸುಮಾರು 50 ದಿನ ಈ ಸಿನಿಮಾದ ಚಿತ್ರೀಕರಣ ನಡೆಯಲಿದೆ. ಚಿತ್ರದಲ್ಲಿ ಶಿವರಾಜ್ಕುಮಾರ್ ಜೊತೆಗೆ ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳ ನಟ ಸೂರಜ್ ವೆಂಜಾರಮೂಡು ಮುಂತಾದವರು ನಟಿಸುತ್ತಿದ್ದಾರೆ. ಕನ್ನಡ, ತೆಲುಗು ಮತ್ತು ಮಲಯಾಳದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿದೆ. ತೆಲುಗಿನ ‘ಆರೆಂಜ್’, ‘ಆರ್ಯ 2’ ಮುಂತಾದ ಚಿತ್ರಗಳಿಗೆ ಛಾಯಾಚಿತ್ರಗ್ರಾಹಕರಾಗಿ ಕೆಲಸ ಮಾಡಿದ್ದ ಬಿ.ರಾಜಶೇಖರ್ ಇಲ್ಲಿ ಕ್ಯಾಮೆರಾ ಹಿಡಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.