ತೆಲುಗು ನಟ ರಾಮ್ಚರಣ್ ನಟನೆಯ ‘ಪೆದ್ದಿ’ಯಲ್ಲಿ ಶಿವರಾಜ್ಕುಮಾರ್ ಪಾತ್ರದ ಫಸ್ಟ್ಲುಕ್ ಬಿಡುಗಡೆಯಾಗಿದೆ.

ಸಿನಿಮಾದೊಳಗೆ ‘ಗೌರ್ನಾಯ್ಡು’ ಆಗಿ ಶಿವರಾಜ್ಕುಮಾರ್ ಅವರು ಕಾಣಿಸಿಕೊಳ್ಳುತ್ತಿದ್ದು, ಗರಡಿಯ ಮುಖ್ಯಸ್ಥರಾಗಿ ನಟಿಸಿದ್ದಾರೆ. ಅವರ ಗರಡಿಯಲ್ಲೇ ಪಳಗಿದ ನಾಯಕನಾಗಿ ರಾಮ್ಚರಣ್ ಬಣ್ಣಹಚ್ಚಿದ್ದಾರೆ. ಸಿನಿಮಾ ಜೂನ್ 4ರಂದು ತೆರೆಕಾಣುತ್ತಿದೆ. ಬುಚ್ಚಿ ಬಾಬು ಸನಾ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ನಾಯಕಿಯಾಗಿ ಜಾಹ್ನವಿ ಕಪೂರ್ ನಟಿಸಿದ್ದಾರೆ.

ಇದು ಶಿವರಾಜ್ಕುಮಾರ್ ಅವರ ಮೊದಲ ತೆಲುಗು ಸಿನಿಮಾವಾಗಿದ್ದು, ಜಗಪತಿ ಬಾಬು, ದಿವೇಂದು ಶರ್ಮಾ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ. ‘ಪೆದ್ದಿ’ ಸ್ಪೋರ್ಟ್ಸ್ ಆ್ಯಕ್ಷನ್ ಡ್ರಾಮಾ ಆಗಿದ್ದು, ಎ.ಆರ್. ರೆಹಮಾನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಮೈತ್ರಿ ಮೂವಿ ಮೇಕರ್ಸ್ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್ಗಳು ಚಿತ್ರವನ್ನು ಪ್ರಸ್ತುತಪಡಿಸುತ್ತಿವೆ. ಆರ್. ರತ್ನವೇಲು ಛಾಯಾಚಿತ್ರಗ್ರಹಣ, ನವೀನ್ ನೂಲಿ ಸಂಕಲನ ಸಿನಿಮಾಗಿದೆ. ಈ ಸಿನಿಮಾ ಮೂಲಕ ಹೊಂಬಾಳೆ ಫಿಲ್ಮ್ಸ್ ವಿದೇಶಗಳಲ್ಲಿ ಸಿನಿಮಾ ವಿತರಣೆಯನ್ನು ಆರಂಭಿಸಿದೆ. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-51-1061392746

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.