ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಪು ಬಣ್ಣದ ಲ್ಯಾಂಬೋರ್ಗಿನಿ ಖರೀದಿಸಿದ ಶ್ರದ್ಧಾ ಕಪೂರ್‌, ಬೆಲೆ ಎಷ್ಟು ಗೊತ್ತಾ?

Published : 25 ಅಕ್ಟೋಬರ್ 2023, 10:31 IST
Last Updated : 25 ಅಕ್ಟೋಬರ್ 2023, 10:31 IST
ಫಾಲೋ ಮಾಡಿ
Comments

ಮುಂಬೈ: ಬಾಲಿವುಡ್‌ ನಟಿ ಶ್ರದ್ಧಾ ಕಪೂರ್‌ ಅವರು ದಸರಾ ಹಬ್ಬದ ಪ್ರಯುಕ್ತ ಲ್ಯಾಂಬೋರ್ಗಿನಿ ಕಾರನ್ನು ಖರೀದಿಸಿದ್ದಾರೆ.

ನಟಿ ₹4.4 ಕೋಟಿ ಮೌಲ್ಯದ ಕೆಂಪು ಬಣ್ಣದ ಹೊಸ ಲ್ಯಾಂಬೋರ್ಗಿನಿ ಹುರಾಕನ್ ಟೆಕ್ನಿಕಾ ಕಾರನ್ನು ಖರೀದಿಸಿ, ಕಾರಿಗೆ ಪೂಜೆ ಸಲ್ಲಿಸುತ್ತಿರುವ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಮುಂಬೈನ ಇಸ್ಕಾನ್ ದೇವಸ್ಥಾನಕ್ಕೆ ಕಾರು ಚಲಾಯಿಸಿಕೊಂಡು ಬಂದ ಶ್ರದ್ಧಾ ಅವರನ್ನು ನೋಡಲು ಜನರು ಜಮಾಯಿಸಿದ್ದರು. ಕಾರು ಖರೀದಿಸಿದ ಶ್ರದ್ಧಾ ಅವರೊಂದಿಗಿನ ಫೋಟೊ ಹಂಚಿಕೊಂಡ ಶೋ ರೂಮ್‌ನ ಸದಸ್ಯೆ ಪೂಜಾ ಚೌಧರಿ, ಇದು ಕೇವಲ ಸೂಪರ್‌ ಕಾರ್‌ ಅಲ್ಲ, ಇದು ಕನಸುಗಳನ್ನು ನನಾಸು ಮಾಡಿಕೊಳ್ಳುವ ಹಾದಿಯಲ್ಲಿ ಬರುವ ಎಲ್ಲಾ ಅಡೆತಡೆಗಳನ್ನು ಧೈರ್ಯದಿಂದ ಎದುರಿಸಿದ ರೀತಿಯ ಸಂಕೇತ ಎಂದು ಬರೆದುಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಶ್ರದ್ಧಾ ಕಪೂರ್‌, ಮಹಿಳೆಯರಿಗೆ ಪ್ರೇರಣೆ ನೀಡುವ ಬಾಸ್‌ಲೇಡಿಯಿಂದ ಮೆಚ್ಚುಗೆ ಪಡೆದದ್ದು ತುಂಬಾ ಸಂತೋಷವಾಯಿತು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT