ಶುಕ್ರವಾರ, ಮೇ 20, 2022
23 °C

‘ಬಘೀರ’ನಾಗಿ ತೆರೆ ಮೇಲೆ ಬರಲಿದ್ದಾರೆ ಶ್ರೀ ಮುರಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಜಿಎಫ್‌ ಖ್ಯಾತಿಯ ನಿರ್ಮಾಪಕ ವಿಜಯ್‌ ಕಿರಗಂದೂರು ಹಾಗೂ ರೋರಿಂಗ್‌ ಸ್ಟಾರ್‌ ಶ್ರೀ ಮುರಳಿ ಜೊತೆಯಾಗಿ ಸಿನಿಮಾ ಮಾಡುತ್ತಿದ್ದಾರೆ. ಹೊಂಬಾಳೆ ಫಿಲ್ಸಂ ಸಂಸ್ಥೆ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡುತ್ತಿದ್ದು ಇದು ಆ ಸಂಸ್ಥೆಯ 8ನೇ ಸಿನಿಮಾವಾಗಿದೆ. ಮುರಳಿ ಹುಟ್ಟುಹಬ್ಬದ ದಿನವಾದ ಇಂದು ಸಿನಿಮಾ ಶೀರ್ಷಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಚಿತ್ರಕ್ಕೆ ‘ಬಘೀರ’ ಎಂದು ಹೆಸರಿಸಲಾಗಿದೆ.

ಈ ಹಿಂದೆ ವಿಜಯ್ ಕಿರಗಂದೂರು ಹೊಸ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಆದರೆ ಸಿನಿಮಾದ ಬಗ್ಗೆ ಯಾವುದೇ ಮಾಹಿತಿ ನೀಡಿರಲಿಲ್ಲ. ‘ಲಕ್ಕಿ’ ಸಿನಿಮಾ ಖ್ಯಾತಿಯ ನಿರ್ದೇಶಕ ಡಾ. ಸೂರಿ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಕೆಜಿಎಫ್ ಖ್ಯಾತಿಯ ಪ್ರಶಾಂತ್‌ ನೀಲ್‌ ‘ಬಘೀರ’ ಶೀರ್ಷಿಕೆಯನ್ನು ಘೋಷಣೆ ಮಾಡಿದ್ದಾರೆ. ವಿಶೇಷವೆಂದರೆ ಚಿತ್ರಕ್ಕೆ ಪ್ರಶಾಂತ್ ನೀಲ್‌ ಅವರೇ ಚಿತ್ರಕಥೆ ಬರೆದಿದ್ದಾರೆ. ಮುರಳಿ ಅವರ ಹೊಸ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಜಾಲತಾಣದ ಪೋಸ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ ಪ್ರಶಾಂತ್‌. ರವಿ ಬಸ್ರೂರು ಸಂಗೀತ ನಿರ್ದೇಶನ ಚಿತ್ರಕ್ಕಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು