ಬುಧವಾರ, 31 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಮಂತ ಸಿನಿಮಾ ಏ.14ರಂದು ತೆರೆಗೆ: ಸೋನು ಸೂದ್ ನಾಯಕ

Last Updated 1 ಏಪ್ರಿಲ್ 2023, 14:45 IST
ಅಕ್ಷರ ಗಾತ್ರ

ಉಡುಪಿ: ರೈತರ ಬದುಕು ಬವಣೆ ಹಾಗೂ ಕಷ್ಟ ಸುಖಗಳನ್ನು ಪ್ರಧಾನವಾಗಿಟ್ಟುಕೊಂಡು ಶ್ರೀಮಂತರ ಸಿನಿಮಾ ನಿರ್ಮಾಣ ಮಾಡಲಾಗಿದ್ದು ಏ.14ರಂದು ರಾಜ್ಯದಾದ್ಯಂತ ಬಿಡುಗಡೆ ಮಾಡಲಾಗುತ್ತಿದೆ ಎಂದು ಚಿತ್ರದ ಸಹಾಯಕ ನಿರ್ದೇಶಕ ಶಿವರಾಜ್ ದಳವಾಯಿ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೋಲ್ಡನ್ ರೈನ್ ಮೂವೀಸ್‌ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದ್ದು ಬಹುಭಾಷಾ ನಟ ಸೋನು ಸೂದ್ ನಾಯಕ ನಟನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಕನ್ನಡದಲ್ಲಿ ಸೋನು ಸೂದ್ ನಾಯಕನಾಗಿ ಅಭಿನಯಿಸುತ್ತಿರುವ ಮೊದಲ ಚಿತ್ರ ಶ್ರೀಮಂತ ಎಂದು ತಿಳಿಸಿದರು.

ನಾಯಕಿಯಾಗಿ ಮುಂಬೈನ ವೈಷ್ಣವಿ ಪಟವರ್ಧನ್, ವೈಷ್ಣವಿ ಚಂದ್ರನ್‌ ಮೆನನ್‌ ಹಾಗೂ ಕ್ರಾಂತಿ ಎಂಬ ರಾಜ್ಯದ ಪ್ರತಿಭೆಯನ್ನು ಪರಿಚಯಿಸಲಾಗಿದೆ. ಹಿರಿಯ ಕಲಾವಿದರಾದ ರಮೇಶ್ ಭಟ್‌, ರವಿಶಂಕರ್ ಗೌಡ, ಸಾಧು ಕೋಕಿಲ, ಚರಣ್ ರಾಜ್, ಕಲ್ಯಾಣಿ, ಗಿರಿ, ರಾಜು ತಾಳಿಕೋಟೆ, ರಂಗ, ಬ್ಯಾಂಕ್ ಮಂಜಣ್ಣ, ಬಸವರಾಜು ಹಾಸನ್ ಸೇರಿದಂತೆ ಗ್ರಾಮೀಣ ಕಲಾ ಪ್ರತಿಭೆಗಳು ಅಭಿನಯಿಸಿದ್ದಾರೆ.

ಹಂಸಲೇಖ ಸಂಗೀತ ಹಾಗೂ ಸಾಹಿತ್ಯ ನೀಡಿದ್ದು, ರವಿಕುಮಾರ್ ಸನ ಛಾಯಾಗ್ರಹಣ ಮಾಡಿದ್ದಾರೆ. ಕೆ.ಎನ್‌.ಪ್ರಕಾಶ್ ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದು ಮಾಸ್ ಮಾದ ಸಾಹಸವಿದೆ. ಮಧನ್ ಹರಿಣಿ ಹಾಗೂ ಮೋಹನ್ ನೃತ್ಯ ಸಂಯೋಜನೆ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT