ಮಂಗಳವಾರ, ಜನವರಿ 25, 2022
25 °C

ನಟ ಕಮಲ್ ಹಾಸನ್‌ ಪುತ್ರಿಯರ ಪುನರ್ಮಿಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳು ಸೂಪರ್ ಸ್ಟಾರ್ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕೋವಿಡ್‌ಗೆ ಒಳಗಾಗಿದ್ದು  ಪುತ್ರಿಯರಾದ ಶ್ರುತಿ ಹಾಗೂ ಅಕ್ಷರಾ ಅವರನ್ನು ನೋಡಿಕೊಳ್ಳುತ್ತಿದ್ದಾರೆ.

ಈ ಬಗ್ಗೆ ಶ್ರುತಿ ಹಾಸನ್‌ ಅವರು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇದು ನಮ್ಮ ಪುನರ್ಮಿಲನ ಎಂದೂ ಅವರು ಹೇಳಿದ್ದಾರೆ. ಇಬ್ಬರು ಕೂಡ ಮನೆಯಲ್ಲಿ ಇರುವ ವಿಡಿಯೊಗಳನ್ನು ಹಂಚಿಕೊಂಡಿದ್ದಾರೆ.

ಸದ್ಯ ಕಮಲ್‌ ಇಲ್ಲಿನ ಮೆಡಿಕಲ್‌ ಕಾಲೇಜಿನಲ್ಲಿ ಐಸೊಲೇಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ದಿನಗಳ ಹಿಂದೆ  ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಅವರು ಸಾಮಾಜಿಕ ಕಳಕಳಿಯಿಂದ ‘ಕೋವಿಡ್–19 ಸಾಂಕ್ರಾಮಿಕ ಸಂಪೂರ್ಣವಾಗಿ ಹೋಗಿಲ್ಲ ಎನ್ನುವುದನ್ನು ದಯವಿಟ್ಟು ಗಮನದಲ್ಲಿಟ್ಟುಕೊಳ್ಳಿ’ಎಂದು ಅವರು ಟ್ವೀಟ್ ಮಾಡಿದ್ದರು. 

ತಮಿಳು ಸೂಪರ್ ಸ್ಟಾರ್ ಮತ್ತು ‘ಮಕ್ಕಳ್ ನೀದಿ ಮೈಯಂ’ ಪಕ್ಷದ ಅಧ್ಯಕ್ಷ ಕಮಲ್ ಹಾಸನ್ ಅವರು ಕೋವಿಡ್‌ಗೆ ಒಳಗಾಗಿದ್ದು  ಪುತ್ರಿಯರಾದ ಶ್ರುತಿ ಹಾಗೂ ಅಕ್ಷರ ಅವರನ್ನು ನೋಡಿಕೊಳ್ಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು