ಗುರುವಾರ , ಅಕ್ಟೋಬರ್ 6, 2022
23 °C

47ರ ಸಂಭ್ರಮದಲ್ಲಿ ನಟಿ ಶ್ರುತಿ: ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು:  ನಟಿ ಶ್ರುತಿ ಅವರು ಇಂದು (ಸೆ.18) 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರು ಸಿನಿಮಾ ಹಾಗೂ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ.

ರಾಜಕೀಯ ನಾಯಕರು ಸೇರಿದಂತೆ ಅಭಿಮಾನಿಗಳು ಹಾಗೂ ಸಿನಿಮಾ ‌ರಂಗದ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಶ್ರುತಿ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಎಮೋಷನಲ್ ಸಿನಿಮಾಗಳ ಮೂಲಕ ಅವರು 90ರ ದಶಕದಲ್ಲಿ ಪ್ರೇಕ್ಷಕರನ್ನು ತಮ್ಮತ್ತ ಸೆಳೆದುಕೊಂಡಿದ್ದರು. ಎಲ್ಲ ರೀತಿಯ ಪಾತ್ರಗಳನ್ನು ಮಾಡುವ ಮೂಲಕ ಅವರು ಸೈ ಎನಿಸಿಕೊಂಡಿದ್ದಾರೆ. 

ನೋಡಿ | PHOTOS: ‘ಸಾಹಸಸಿಂಹ’ ವಿಷ್ಣುವರ್ಧನ್‌ಗೆ ನಮನ 

ಶ್ರುತಿ ಕನ್ನಡದಲ್ಲಿ ನಾಯಕಿಯಾಗಿ ನಟಿಸಿದ ಮೊದಲ ಚಿತ್ರ ‘ಶ್ರುತಿ’. ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಧಾರಾವಾಹಿ, ಬಿಗ್‌ಬಾಸ್‌ ರಿಯಾಲಿಟಿ ಶೋಗಳಲ್ಲೂ ಕಾಣಿಸಿಕೊಂಡಿದ್ದಾರೆ. 120ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಸದ್ಯ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಸದ್ಯ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

ಓದಿ: ಜನ್ಮದಿನದ ಸಂಭ್ರಮದಲ್ಲಿ ’ರಿಯಲ್‌ ಸ್ಟಾರ್‌’ ಉಪೇಂದ್ರ: ನಟನಿಗೆ 54ನೇ ವಸಂತ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು