ಗುರುವಾರ , ಅಕ್ಟೋಬರ್ 21, 2021
28 °C

ಟಾಪ್‌ಲೆಸ್‌ ಫೋಟೊ ಹಂಚಿಕೊಂಡ ನಟಿ ಶ್ರುತಿ ಹಾಸನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಕ್ಷಿಣ ಭಾರತದ ಖ್ಯಾತ ನಟಿ ಶ್ರುತಿ ಹಾಸನ್‌ ಫೋಟೊಶೂಟ್‌ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಅವರ ಬ್ಲ್ಯಾಕ್‌ ಆಂಡ್‌ ವೈಟ್‌ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. 

ಶ್ರುತಿ ಹಾಸನ್‌ ಇತ್ತೀಚೆಗೆ ಫೋಟೊಶೂಟ್‌ ಮಾಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಅವುಗಳಲ್ಲಿ ಟಾಪ್‌ಲೆಸ್‌ ಆಗಿರುವ ಬ್ಲ್ಯಾಕ್‌ ಆಂಡ್‌ ವೈಟ್‌ ಫೋಟೊ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. 

ಟಾಪ್‌ಲೆಸ್‌ ಫೋಟೊವನ್ನು ಪೋಸ್ಟ್‌ ಮಾಡಿರುವ ಶ್ರುತಿ ಹಾಸನ್‌ 'ನನ್ನ ಹೆಸರನ್ನು ಜೋರಾಗಿ ಹೇಳಿ' ಎಂದು ಅವರು ಬರೆದುಕೊಂಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಗೆಳೆಯನ ಜೊತೆ ವರ್ಕೌಟ್‌ ಮಾಡುವ ವಿಡಿಯೊವನ್ನು ಹಂಚಿಕೊಂಡಿದ್ದರು. ಈ ವಿಡಿಯೊ ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಯಾಗಿದ್ದರು.

ಸದ್ಯ ಶ್ರುತಿ ಹಾಸನ್‌ ವಿಜಯ್‌ ಸೇತುಪತಿ ನಾಯಕರಾಗಿ ನಟಿಸುತ್ತಿರುವ ’ಲಬಾಮ್‌’ ಹಾಗೂ ಪ್ರಭಾಸ್‌ ನಟಿಸುತ್ತಿರುವ ’ಸಲಾರ್‌’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು