ಮಂಗಳವಾರ, ಮೇ 17, 2022
29 °C

‘ಸಲಾರ್‌’ ಚಿತ್ರತಂಡ ಸೇರಲಿದ್ದಾರೆ ನಟಿ ಶ್ರುತಿ ಹಾಸನ್

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ಕೆಜಿಎಫ್‌’ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಆ್ಯಕ್ಷನ್‌ ಥ್ರಿಲ್ಲರ್‌ ‘ಸಲಾರ್‌’ ಚಿತ್ರದಲ್ಲಿ ನಟಿ ಶ್ರುತಿ ಹಾಸನ್‌ ನಟಿಸಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಪ್ಯಾನ್‌ ಇಂಡಿಯಾ ಸಿನಿಮಾ ಎಂದೇ ಬಿಂಬಿತವಾಗಿರುವ ಈ ಚಿತ್ರದಲ್ಲಿ ನಟ ಪ್ರಭಾಸ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಹೊಂಬಾಳೆ ಫಿಲಂಸ್ ಬ್ಯಾನರ್‌ನ ವಿಜಯ್ ಕಿರಗಂದೂರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಶ್ರುತಿ ಹಾಸನ್‌ ಅವರ 35 ನೇ ಹುಟ್ಟುಹಬ್ಬದ ಅಂಗವಾಗಿ ಹೊಂಬಾಳೆ ಫಿಲಂಸ್ ಟ್ವಿಟರ್‌ನಲ್ಲಿ ಶುಭ ಕೋರಿದೆ.

ಇನ್‌ಸ್ಟಾಗ್ರಾಂನಲ್ಲಿ ಶುಭ ಕೋರಿರುವ ಪ್ರಭಾಸ್‌, ‘ ಸಲಾರ್ ಚಿತ್ರದಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.

ಸಲಾರ್ ಚಿತ್ರವು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಕೆಲವೇ ದಿನಗಳಲ್ಲಿ ಚಿತ್ರೀಕರಣ ಆರಂಭವಾಗಲಿದ್ದು, ವರ್ಷಾಂತ್ಯದ ವೇಳೆ ಚಿತ್ರ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು