ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್ ಜೋಡಿಯಾಗಿ ನಟಿಸುತ್ತಿರುವ ‘NH 66’ ಚಿತ್ರ ಇತ್ತೀಚೆಗಷ್ಟೇ ಸೆಟ್ಟೇರಿದೆ. ಮಂಜುನಾಥ್ ಟಿ.ಆರ್ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರವಿದು.

‘ನಾನು ನಿರ್ದೇಶಕ ಭಾರ್ಗವ ಅವರ ಬಳಿ ಕೆಲಸ ಮಾಡಿದ್ದೆ. ಬಳಿಕ ವಿದೇಶಕ್ಕೆ ತೆರಳಿ ಸ್ಕ್ರಿಪ್ಟ್ ರಚನೆ, ಚಿತ್ರಕಥೆ ಬಗ್ಗೆ ಅಧ್ಯಯನ ನಡೆಸಿದೆ. ಈಗ ತಾಯ್ನಾಡಿಗೆ ಮರಳಿ ನನ್ನ ಮೊದಲ ನಿರ್ದೇಶನದ ಚಿತ್ರವನ್ನು ಆರಂಭಿಸಿದ್ದೇನೆ. ರಾಯ ಫಿಲ್ಮ್ಸ್ ಎಂಬ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡುತ್ತಿದ್ದೇನೆ. ಶೀರ್ಷಿಕೆ ಹೇಳುವಂತೆ ಇದೊಂದು ರಸ್ತೆ ಮೇಲಿನ ಪಯಣದ ಕಥೆ. ಥ್ರಿಲ್ಲರ್ ಜಾನರ್ನ ಚಿತ್ರವೂ ಹೌದು. ಮಂಗಳೂರಿನಿಂದ ಗೋವಾಕ್ಕೆ ಹೋಗುವ ಹಾದಿಯಲ್ಲಿ ಎರಡು ರಾತ್ರಿಗಳಲ್ಲಿ ನಡೆಯುವ ಕಥೆಯಾಗಿದ್ದು, ನಾಲ್ಕು ಪಾತ್ರಗಳ ಸುತ್ತ ಸುತ್ತುತ್ತದೆ. ಇದೇ ತಿಂಗಳಿನಿಂದ ಮಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ’ ಎಂದರು ನಿರ್ದೇಶಕ.

ರಾಜೇಶ್ ನಟರಂಗ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸುನೀತ್ ಹಲಗೇರಿ ಛಾಯಾಚಿತ್ರಗ್ರಹಣ ಹಾಗೂ ಸ್ವಾಮಿನಾಥನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

‘ನಾನು ಕಾರು ಚಾಲಕನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಕಥೆ ಬಹಳ ಸೊಗಸಾಗಿದೆ’ ಎಂದು ಪ್ರಮೋದ್ ಶೆಟ್ಟಿ ಹೇಳಿದರು.

‘ಇತ್ತೀಚೆಗೆ ನನಗೆ ಒಳ್ಳೆಯ ಪಾತ್ರಗಳು ಸಿಗುತ್ತಿವೆ. ಈಗಾಗಲೇ ಸಾಕಷ್ಟು ಪಾತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದಲ್ಲಿನ ಪಾತ್ರ ಅವೆಲ್ಲಕ್ಕಿಂತ ಭಿನ್ನವಾಗಿದೆ’ ಎಂದು ಶೃತಿ ತಮ್ಮ ಪಾತ್ರ ಪರಿಚಯಿಸಿಕೊಂಡರು. v

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-51-766866884

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.