ಬೆಂಗಳೂರು: ಅಕ್ಷಯ್ ಕುಮಾರ್ ಅವರ ಬಹುನಿರೀಕ್ಷಿತ ಚಿತ್ರ ಬಚ್ಚನ್ ಪಾಂಡೆಯ ಹಾಡೊಂದಕ್ಕೆ ಲುಂಗಿ ಡ್ಯಾನ್ಸ್ ಮಾಡುವ ಮೂಲಕ ಸಿದ್ಧಾಂತ್ ಚತುರ್ವೇದಿ ನೆಟ್ಟಿಗರ ಗಮನ ಸೆಳೆದಿದ್ದಾರೆ.
ಬಚ್ಚನ್ ಪಾಂಡೆ ಚಿತ್ರದ ‘ಬೇವಾಫ‘ ಹಾಡಿಗೆ ಇನ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಬಹಳ ಬೇಡಿಕೆ ಕಂಡುಬಂದಿದೆ.
ಬೇವಾಫ ಹಾಡಿಗೆ ಸಿದ್ಧಾಂತ್ ಅವರು ಗೆಳೆಯರ ಜತೆಗೆ ಸಮುದ್ರ ತೀರದಲ್ಲಿ ಡ್ಯಾನ್ಸ್ ಮಾಡಿದ್ದಾರೆ.
ಅದರಲ್ಲಿ ವಿಶೇಷವೇನೆಂದರೆ, ಅವರು ಲುಂಗಿ ಧರಿಸಿರುವುದು!
ಸಿದ್ಧಾಂತ್ ಲುಂಗಿ ಡ್ಯಾನ್ಸ್‌ಗೆ ಅಭಿಮಾನಿಗಳು ಫಿದಾ ಆಗಿದ್ದು, ನೆಟ್ಟಿಗರು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿದ್ಧಾಂತ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ವಿಡಿಯೊ ಮೂರು ಲಕ್ಷಕ್ಕೂ ಅಧಿಕ ಲೈಕ್ಸ್ ಪಡೆದುಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.