ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆಜಾನ್ ಪ್ರೈಮ್‌ನಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಶೇರ್‌ಶಾ

Last Updated 31 ಆಗಸ್ಟ್ 2021, 8:51 IST
ಅಕ್ಷರ ಗಾತ್ರ

ಬೆಂಗಳೂರು: ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರ ಅಡ್ವಾಣಿ ನಟನೆಯ ‘ಶೇರ್‌ಶಾ’ ಚಿತ್ರ ಅಮೆಜಾನ್‌ ಪ್ರೈಮ್‌ನಲ್ಲಿ ಅತಿ ಹೆಚ್ಚಿನ ವೀಕ್ಷಣೆ ಪಡೆದುಕೊಂಡಿದೆ.

ಕಾರ್ಗಿಲ್ ವೀರ ಯೋಧ, ಪರಮ್ ವೀರ್ ಚಕ್ರ ಪುರಸ್ಕೃತ ವಿಕ್ರಂ ಭಾತ್ರಾ ಅವರ ಜೀವನಾಧಾರಿತ ಚಿತ್ರ ಶೇರ್‌ಶಾ ಅಮೆಜಾನ್ ಪ್ರೈಮ್ ವಿಡಿಯೊ ಇಂಡಿಯಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು.

ಕಾರ್ಗಿಲ್ ಯುದ್ಧ ಮತ್ತು ವೀರಯೋಧನ ಸಾಹಸದ ಕಥೆಯನ್ನು ಹೊಂದಿರುವ ಶೇರ್‌ಶಾ ಚಿತ್ರವನ್ನು ಧರ್ಮ ಪ್ರೊಡಕ್ಷನ್ಸ್ ಮತ್ತು ಕಾಶ್ ಎಂಟರ್‌ಟೈನ್‌ಮೆಂಟ್ ನಿರ್ಮಾಣ ಮಾಡಿದ್ದು, ವಿಷ್ಣು ವರದನ್ ನಿರ್ದೇಶಿಸಿದ್ದರು.

ನಾಯಕ ವಿಕ್ರಂ ಭಾತ್ರಾ ಪಾತ್ರದಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ ನಟಿಸಿದ್ದರೆ, ಕಿಯಾರ ಅಡ್ವಾಣಿ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬಿಡುಗಡೆಯಾಗಿದ್ದ ಶೇರ್‌ಶಾ ಚಿತ್ರಕ್ಕೆ ಜನರಿಂದ ಪ್ರಶಂಸೆ ಕೇಳಿಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT