ತೆರೆ ಮೇಲೆ ‘ಸಿಂಹಪ್ರಿಯ’

ವಸಿಷ್ಠಸಿಂಹ, ಹರಿಪ್ರಿಯ ಹಾಗೂ ದಿಗಂತ್ ಮಂಚಾಲೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ, ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಕಥಾಹಂದರಹೊಂದಿರುವ ‘ಯದಾ ಯದಾ ಹಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.
ವಸಿಷ್ಠ ಸಿಂಹ ಹಾಗೂ ಹರಿಪ್ರಿಯ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಚಿತ್ರತಂಡವು ಮದುವೆಯ ಉಡುಗೊರೆ ರೂಪದಲ್ಲಿ ಚಿತ್ರದ ವಿಶೇಷ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದೆ.
ತೆಲುಗಿನ ‘ಎವುರು’ ಚಿತ್ರದ ರೀಮೇಕ್ ಇದಾಗಿದ್ದು, ತೆಲುಗಿನಲ್ಲಿ ಎರಡು ಚಿತ್ರಗಳನ್ನು ನಿರ್ದೇಶಿಸಿರುವ ಅಶೋಕ್ ತೇಜ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಒಂದು ಕೊಲೆಯ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಈ ಚಿತ್ರದಲ್ಲಿ ಹೇಳಲಾಗಿದೆ. ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ ಪಾತ್ರವನ್ನು ಹರಿಪ್ರಿಯಾ ಹಾಗೂ ಅದ್ವಿಶೇಷ್ ಪಾತ್ರವನ್ನು ದಿಗಂತ್ ಮಾಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.