ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಫೆ. 20ಕ್ಕೆ ‘ಗುರು–70 ಸಂಗೀತ ಸಂಪತ್ತು’ ಕಾರ್ಯಕ್ರಮ

Published : 19 ಫೆಬ್ರುವರಿ 2021, 11:13 IST
ಫಾಲೋ ಮಾಡಿ
Comments

ಬೆಂಗಳೂರು: ಖ್ಯಾತ ಗಾಯಕ, ಚಲನಚಿತ್ರ ಸಂಗೀತ ನಿರ್ದೇಶಕರಾದ ಕೆ.ಗುರುರಾಜ್‌ ಅವರ 70ನೇ ಜನ್ಮದಿನದ ಸಂಭ್ರಮಾಚರಣೆ ಅಂಗವಾಗಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳ ಬಳಗವು ‘ಗುರು–70 ಸಂಗೀತ ಸಂಪತ್ತು’ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಿದೆ.

ಫೆ.20ರಂದು ಸಂಜೆ 5 ಗಂಟೆಗೆ ಚಾಮರಾಜಪೇಟೆಯ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದ ಡಾ.ರಾಜ್‌ಕುಮಾರ್‌ ಕಲಾಭವನದ ಅಂಬರೀಷ್‌ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಸಮಾರಂಭದಲ್ಲಿ ಹೆಸರಾಂತ ಕಲಾವಿದರಿಂದ ಚಿತ್ರಗೀತೆಗಳ ಗಾಯನವಿದೆ.

ಮುಖ್ಯಅತಿಥಿಗಳಾಗಿ ನಟ ಪ್ರಣಯರಾಜ ಶ್ರೀನಾಥ್‌, ಶಾಸಕ ಎಂ.ಕೃಷ್ಣಪ್ಪ, ಕರ್ನಾಟಕ ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್‌, ಸಂಗೀತ ನಿರ್ದೇಶಕ ಗುರುಕಿರಣ್‌, ನಟಿ ವಿನಯಾ ಪ್ರಸಾದ್‌, ಲಹರಿ ಆಡಿಯೊ ಸಂಸ್ಥೆಯ ಮಾಲೀಕ ಲಹರಿ ವೇಲು ಮುಂತಾದವರು ಉಪಸ್ಥಿತರಿರಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT