ಸೋಮವಾರ, ಅಕ್ಟೋಬರ್ 3, 2022
24 °C

ರಾಹುಲ್‌ ಜೈನ್‌ ವಿರುದ್ಧ ಅತ್ಯಾಚಾರ ದೂರು: ಆರೋಪ ನಿರಾಕರಿಸಿದ ಗಾಯಕ 

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ಖ್ಯಾತ ಗಾಯಕ ರಾಹುಲ್‌ ಜೈನ್‌ ವಿರುದ್ಧ ಅತ್ಯಾಚಾರದ ದೂರು ದಾಖಲಾಗಿದೆ ಎಂದು ಮಹಾರಾಷ್ಟ್ರ ಪೊಲೀಸರು ಹೇಳಿದ್ದಾರೆ.

ಮಹಿಳೆಯೊಬ್ಬರು ಇಲ್ಲಿನ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರು ಆಧರಿಸಿ ರಾಹುಲ್‌ ಜೈನ್‌ ವಿರುದ್ಧ ಎಫ್‌ಐಆರ್‌ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೂರು ನೀಡಿರುವ ಮಹಿಳೆ ಕಾಸ್ಟೂಮ್‌ ಸ್ಟೈಲಿಸ್ಟ್‌ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಯುವ ಸಿನಿಮಾ ವಿಮರ್ಶಕ, ವಿಡಿಯೊ ಜಾಕಿ ಕೌಶಿಕ್‌ ನಿಧನ

ಕಾಸ್ಟೂಮ್‌ ಸ್ಟೈಲಿಸ್ಟ್‌ ಆಗಿರುವ ಈ ಮಹಿಳೆಯನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದಾಗಿ ರಾಹುಲ್‌ ಅಭಯ ನೀಡಿದ್ದರು. ಆಗಸ್ಟ್‌ 11ರಂದು ಈ ಬಗ್ಗೆ ಮಾತನಾಡಲು ಮಹಿಳೆಯನ್ನು ತಮ್ಮ ಫ್ಲಾಟ್‌ಗೆ ಕರೆಸಿಕೊಂಡಿದ್ದರು. ನಂತರ ಅವರು ನನ್ನ ಮೇಲೆ ಅತ್ಯಾಚಾರ ಮಾಡಿದರು. ರಾಹುಲ್‌ ಅವರು ನನ್ನ ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದರು ಎಂದು ಮಹಿಳೆ ದೂರಿನಲ್ಲಿ ಹೇಳಿದ್ದಾರೆ.

ಈವರೆಗೂ ಪೊಲೀಸರು ರಾಹುಲ್‌ ಅವರನ್ನು ಬಂಧಿಸಿಲ್ಲ. ಈ ಘಟನೆಯಿಂದಾಗಿ ರಾಹುಲ್‌ಗೆ ಕಾನೂನು ಸಂಕಷ್ಟ ಎದುರಾಗಿದೆ.

ಆರೋಪ ತಳ್ಳಿ ಹಾಕಿದ ರಾಹುಲ್‌: ಈ ಘಟನೆ ಬಗ್ಗೆ ನನಗೆ ಏನು ಗೊತ್ತಿಲ್ಲ. ಆ ಮಹಿಳೆ ಮಾಡಿರುವ ಆರೋಪಗಳು ಸುಳ್ಳು ಎಂದು ರಾಹುಲ್‌ ಜೈನ್‌ ಸ್ಪಷ್ಟಪಡಿಸಿದ್ದಾರೆ.

ನಾನು ಯಾರನ್ನು ಕೂಡ ಸಾಮಾಜಿಕ ಮಾಧ್ಯಮಗಳಲ್ಲಿ ಪರಿಚಯ ಮಾಡಿಕೊಂಡು ಫ್ಲಾಟ್‌ಗೆ ಕರೆಸಿಕೊಂಡಿಲ್ಲ. ಆ ಮಹಿಳೆ ಯಾರು ಎಂಬುದು ನನಗೆ ತಿಳಿದಿಲ್ಲ. ಆಕೆ ಮಾಡುತ್ತಿರುವ ಆರೋಪಗಳು ಸುಳ್ಳು ಮತ್ತು ಆಧಾರ ರಹಿತ ಎಂದು ರಾಹುಲ್‌ ಜೈನ್‌ ಹೇಳಿದ್ದಾರೆ.

ಈ ಹಿಂದೆ ಕೂಡ ಮಹಿಳೆಯೊಬ್ಬರು ನನ್ನ ಮೇಲೆ ಇಂತಹ ಆರೋಪ ಮಾಡಿದ್ದರು. ನಂತರ ಕೋರ್ಟ್‌ನಲ್ಲಿ ನನಗೆ ನ್ಯಾಯ ಸಿಕ್ಕಿತ್ತು ಎಂದು ರಾಹುಲ್‌ ಹೇಳಿದ್ದಾರೆ.

ಇದನ್ನೂ ಓದಿ: ಧನಂಜಯ್‌, ರಚಿತಾ ನಟನೆಯ ‘ಮಾನ್ಸೂನ್‌ ರಾಗ’ ರಿಲೀಸ್‌ ಮುಂದಕ್ಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು