ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ ಹೃದಯಾಘಾತದಿಂದ ನಿಧನ

Last Updated 16 ಫೆಬ್ರುವರಿ 2022, 6:07 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳದ ಖ್ಯಾತ ಗಾಯಕಿ ಸಂಧ್ಯಾ ಮುಖರ್ಜಿ (Sandhya Mukherjee)ಹೃದಯಾಘಾತದಿಂದ ನಿಧನರಾದರು.

ಅವರಿಗೆ 90 ವರ್ಷ ವಯಸ್ಸಾಗಿತ್ತು. ಹಲವು ದಿನಗಳಿಂದ ಸಂದ್ಯಾ ಮುಖರ್ಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ (ಫೆ.15) ರಾತ್ರಿ ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ಮುಖರ್ಜಿ ಅವರು ಭಾರತೀಯ ಸಿನಿಮಾದ ಸಾವಿರಾರು ಹಾಡುಗಳಿಗೆ ದನಿಯಾಗಿದ್ದು, ಹಲವು ಆಲ್ಬಮ್‌ಗಳನ್ನು ಹೊರತಂದಿದ್ದರು. ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ 1970ರಲ್ಲೇ ಅವರು ರಾಷ್ಟ್ರ ಪ್ರಶಸ್ತಿಯನ್ನು ಪಡೆದಿದ್ದರು.

ಇತ್ತೀಚೆಗೆ ಕೇಂದ್ರ ಸರ್ಕಾರ ಸಂದ್ಯಾ ಮುಖರ್ಜಿಗೆ ’ಪದ್ಮಶ್ರೀ’(Padma Shre)ಪ್ರಶಸ್ತಿಯನ್ನು ಘೋಷಣೆ ಮಾಡಿತ್ತು. ಆದರೆ ಆಪ್ರಶಸ್ತಿಯನ್ನು ಸಂದ್ಯಾ ಮುಖರ್ಜಿ ನಿರಾಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT