ಸೋಮವಾರ, ಅಕ್ಟೋಬರ್ 26, 2020
27 °C

ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ

ಚೆನ್ನೈ: ಕೋವಿಡ್‌–19 ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ (74) ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಕಳೆದ 24 ಗಂಟೆಗಳಲ್ಲಿ ಎಸ್‌ಪಿಬಿ ಅವರ ಆರೋಗ್ಯ ಕ್ಷೀಣಿಸುತ್ತಿದೆ ಹಾಗೂ ಅವರ ಸ್ಥಿತಿ ಗಂಭೀರವಾಗಿದೆ. ಹೆಚ್ಚುವರಿ ಆಕ್ಸಿಜನ್ ಪೂರೈಸಲು ಇಸಿಎಂಒ ಸಾಧನ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಎಂಜಿಎಂ ಹೆಲ್ತ್‌ಕೇರ್‌ ಗುರುವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಎಸ್‌ಪಿಬಿ ಶ್ವಾಸಕೋಶದ ಆರೋಗ್ಯ ಉತ್ತಮಗೊಳ್ಳುತ್ತಿದೆ. ಫಿಸಿಯೊಥೆರಪಿ ನಡೆಸಲಾಗುತ್ತಿದ್ದು, ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಇತ್ತೀಚೆಗಷ್ಟೇ ಅವರ ಪುತ್ರ ಎಸ್‌.ಪಿ.ಚರಣ್‌ ಸಂದೇಶ ಪ್ರಕಟಿಸಿದ್ದರು.

ಕೋವಿಡ್‌–19 ಸೋಂಕು ಇರುವುದು ದೃಢಪಟ್ಟ ಬಳಿಕ ಆಗಸ್ಟ್‌ 5ರಂದು ಎಸ್‌ಪಿಬಿ ಅವರನ್ನು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೆಂಟಿಲೇಟರ್‌ ಅಳವಡಿಸಿ ಐಸಿಯುಗೆ ಸ್ಥಳಾಂತರಿಸಲಾಗಿತ್ತು. ಕೆಲವು ದಿನಗಳ ಹಿಂದೆ ಅವರಿಗೆ ಕೊರೊನಾ ನೆಗೆಟಿವ್‌ ಇರುವ ವರದಿ ಬಂದಿತ್ತು.

ಎಸ್‌ಪಿಬಿ 16 ಭಾಷೆಗಳಲ್ಲಿ ಸುಮಾರು 40,000 ಹಾಡುಗಳನ್ನು ಹಾಡಿದ್ದಾರೆ. ಆರು ಬಾರಿ ರಾಷ್ಟ್ರೀಯ ಪ್ರಶಸ್ತಿ ಸಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು