ಶನಿವಾರ, ಏಪ್ರಿಲ್ 1, 2023
23 °C

ಏಕ ಪರದೆ ಚಿತ್ರಮಂದಿರ: ಸರ್ಕಾರದಿಂದ ತೆರಿಗೆ ವಿನಾಯಿತಿ ಪ್ರಕಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿರುವ 630 ಏಕ ಪರದೆ ಚಿತ್ರಮಂದಿರಗಳಿಗೆ 2021–22ನೇ ಸಾಲಿನ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ವಾರ್ತಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಕೋವಿಡ್‌ ಕಾರಣದಿಂದ ರಾಜ್ಯದಲ್ಲಿ 14 ತಿಂಗಳಿನಿಂದ ಬಹುತೇಕ ಚಿತ್ರಮಂದಿರಗಳ ಬಾಗಿಲು ತೆರೆದಿಲ್ಲ. ಮುಂದೆಯೂ ಪ್ರೇಕ್ಷಕರು ಚಿತ್ರಮಂದಿರಗಳಿಗೆ ಬರುವ ಸಾಧ್ಯತೆ ಕಡಿಮೆ ಎಂದು ಆತಂಕ ವ್ಯಕ್ತಪಡಿಸಿದ್ದ ಕರ್ನಾಟಕ ಚಿತ್ರ ಪ್ರದರ್ಶಕರ ಸಂಘ, ಏಕ ಪರದೆ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತ್ತು.

ಸಂಘದ ಬೇಡಿಕೆಯನ್ನು ಆಧರಿಸಿ ಏಕ ಪರದೆಯ ಚಿತ್ರಮಂದಿರಗಳ ಪ್ರಸಕ್ತ ವರ್ಷದ ಆಸ್ತಿ ತೆರಿಗೆಯನ್ನು ಮನ್ನಾ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ₹ 9 ಕೋಟಿ ಹೊರೆಯಾಗಲಿದೆ ಎಂದು ವಾರ್ತಾ ಇಲಾಖೆ ಆದೇಶದಲ್ಲಿ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು