ಸೋಮವಾರ, ಮಾರ್ಚ್ 1, 2021
31 °C

ಚಿತ್ರೀಕರಣ ಮುಗಿಸಿದ ಸೈರಾ ನರಸಿಂಹ ರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೆಗಾಸ್ಟಾರ್ ಚಿರಂಜೀವಿ ನಟನೆಯ, ರಾಮ್‌ ಚರಣ್ ತೇಜ ನಿರ್ಮಾಣದ ತೆಲುಗಿನ ಬಹು ನಿರೀಕ್ಷಿತ ಚಿತ್ರ ಸೈರಾ ನರಸಿಂಹ ರೆಡ್ಡಿ ಚಿತ್ರದ ಚಿತ್ರೀಕರಣ ಮುಗಿದಿದೆ.

ಈ ಚಿತ್ರವನ್ನು ರಾಮ್ ಚರಣ್ ತಮ್ಮ ಹೋಂ ಬ್ಯಾನರ್ ಕೋನಿಡೆಲಾ ಸಂಸ್ಥೆಯ ಕಡೆಯಿಂದ ನಿರ್ಮಾಣ ಮಾಡುತ್ತಿದ್ದಾರೆ.

ಈ ಬಗ್ಗೆ ಟ್ವಿಟರ್‌ ಮಾಹಿತಿ ಹಂಚಿಕೊಂಡ ಛಾಯಾಗ್ರಾಹಕ ರತ್ನವೇಲು ‘ಸೈರಾ ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದೆ. ಈ ಚಿತ್ರಕ್ಕಾಗಿ ಶ್ರಮವಹಿಸಿ ಕೆಲಸ ಮಾಡಿದ ಹಾಗೂ ಸಹಕಾರ ನೀಡಿದ ಎಲ್ಲಾ ಚಿತ್ರತಂಡದ ಸದಸ್ಯರಿಗೆ ಧನ್ಯವಾದಗಳು. ಈ ಚಿತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದಿದ್ದಾರೆ.

ಈ ಚಿತ್ರವು ಬ್ರಿಟಿಷ್ ಆಡಳಿತದ ವಿರುದ್ಧ ದಂಗೆ ಎದ್ದ ನಾಯಕರಲ್ಲಿ ಒಬ್ಬರಾದ ರಾಯಲಸೀಮೆಯ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲವಾಡ ನರಸಿಂಹ ರೆಡ್ಡಿ ಅವರ ಜೀವನ ಕಥೆಯನ್ನು ಆಧರಿಸಿದ ಚಿತ್ರವಾಗಿದೆ.

1857ರಲ್ಲಿ ನಡೆದ ಮೊದಲ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟಿಷರ ವಿರುದ್ಧ ದಂಗೆ ಎದ್ದ ಹೋರಾಟಗಾರರಲ್ಲಿ ಇವರು ಒಬ್ಬರು. 1847ರಲ್ಲಿ ಇವರನ್ನು ಸೆರೆಹಿಡಿದು ಸಾರ್ವಜನಿಕವಾಗಿ ನೇಣಿಗೇರಿಸಲಾಯಿತು.

ಸುರೇಂದರ್ ರೆಡ್ಡಿ ನಿರ್ದೇಶನದ ಈ ಸಿನಿಮಾವನ್ನು ₹ 200 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಬಾಲಿವುಡ್‌ ಬಿಗ್‌ ಬಿ ಅಮಿತಾಭ್‌ ಬಚ್ಚನ್‌, ನಯನತಾರಾ, ವಿಜಯ್‌ ಸೇತುಪತಿ, ಸುದೀಪ್‌ ಹಾಗೂ ಜಗಪತಿ ಬಾಬು ಸೇರಿದಂತೆ ಬಾಲಿವುಡ್‌, ಕಾಲಿವುಡ್‌, ಟಾಲಿವುಡ್‌ ಹಾಗೂ ಸ್ಯಾಂಡಲ್‌ವುಡ್‌ನ ಖ್ಯಾತ ನಟರು ಸಿನಿಮಾದಲ್ಲಿ ನಟಿಸಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು