ಸೋಮವಾರ, ಡಿಸೆಂಬರ್ 5, 2022
24 °C

ಟೀಸರ್‌ನಲ್ಲಿ ಮೊಳಗಿದೆ ಪ್ರವೀರ್‌ನ ‘ಸೈರನ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರವೀರ್ ಶೆಟ್ಟಿ ನಾಯಕನಾಗಿ ಅಭಿನಯಿಸಿರುವ ಸಸ್ಪೆನ್ಸ್ ಥ್ರಿಲ್ಲರ್ ಆಧಾರಿತ ‘ಸೈರನ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್‌ಗೆ ಸಿಕ್ಕ ಪ್ರತಿಕ್ರಿಯೆಯಿಂದ ಖುಷಿಯಾಗಿರುವ ನಿರ್ಮಾಪಕ ಬಿಜು ಶಿವಾನಂದ್ ಅವರು ತಮ್ಮ ‘ಡೆಕ್ಕನ್ ಕಿಂಗ್ ಪ್ರೊಡಕ್ಷನ್ಸ್’ ಮೂಲಕ ಮತ್ತೆರಡು ನೂತನ ಚಿತ್ರಗಳ ನಿರ್ಮಾಣಕ್ಕೆ ಮುಂದಾಗಿದ್ದಾರಂತೆ.

ಪ್ಯಾನ್ ಇಂಡಿಯಾ ‘ಸೈರನ್’ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಮುಂದಿನ ತಿಂಗಳು ಚಿತ್ರ ತೆರೆಗೆ ಬರಲಿದೆ ಎಂದಿದೆ ಚಿತ್ರ ತಂಡ. ರಾಜ ವೆಂಕಯ್ಯ ಅವರು ಈ ಚಿತ್ರದ ನಿರ್ದೇಶಕರು.

ನಾಗೇಶ್ ಆಚಾರ್ಯ ಛಾಯಾಗ್ರಹಣ, ಭಾರದ್ವಾಜ್ ಸಂಗೀತ ನಿರ್ದೇಶನ ಹಾಗೂ ದೀಪಕ್ ಬಾಲಾಜಿ ಸಂಕಲನ ಈ ಚಿತ್ರಕ್ಕಿದೆ.

‘ಸೈರನ್’ ಪ್ರವೀರ್ ಶೆಟ್ಟಿ ಅಭಿನಯದ ಮೊದಲ ಚಿತ್ರ. ಅವರು ಮುಂಬೈನ ಅನುಪಮ್ ಖೇರ್ ಇನ್‌ಸ್ಟಿಟ್ಯೂಟ್‌ನ ವಿದ್ಯಾರ್ಥಿ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಅವರ ಪುತ್ರ. ಲಾಸ್ಯ ಈ ಚಿತ್ರದ ‌ನಾಯಕಿ. ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ್‌ ಕುಮಾರ್, ಪವಿತ್ರಾ ಲೋಕೇಶ್, ಸ್ಪರ್ಶ ರೇಖಾ, ಸುಕನ್ಯ, ಸಾಯಿಲೀನ, ಮುರಳಿ, ರಾಮನಾಥನ್, ಮಂಜಯ್ಯ ತಾರಾಗಣದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು