ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಕ್ಸ್‌ಟೀನ್‌ ಸ್ವೀಟಿಯೂ ಉಪೇಂದ್ರ ಕಂಠವೂ: ಹುಷಾರ್‌ ಚಿತ್ರದ ಹಾಡಿಗೆ ಉಪ್ಪಿ ಧ್ವನಿ

Last Updated 20 ಮಾರ್ಚ್ 2022, 10:43 IST
ಅಕ್ಷರ ಗಾತ್ರ

‘ನೀ ನೋಡೊಕೆ ಸಿಕ್ಸಟೀನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿ...’ ಇದು ರಿಯಲ್‌ ಸ್ಟಾರ್‌ ಉಪೇಂದ್ರ ಅವರು ಹಾಡಿರುವ ಹಾಡು. ‘ಹುಷಾರ್‌’ ಚಿತ್ರದ ಹಾಡಿಗೆ ಉಪೇಂದ್ರ ಧ್ವನಿಯಾಗಿದ್ದಾರೆ. ಸತೀಶ್‌ ರಾಜ್‌ ಅವರು ಬರೆದ ಈ ಹಾಡನ್ನು ಸಾಧು ಕೋಕಿಲ ಅವರ ಸ್ಟುಡಿಯೋದಲ್ಲಿ ಅವರು ಹಾಡಿದ್ದಾರೆ.

ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಗೀತರಚನೆ, ನಿರ್ದೇಶನವೂ ಅವರದ್ದೇ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು.

ನಮ್ಮ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರುತ್ತದೆ. ಅದಕ್ಕೆ ಯಾರೂ ಹೊಣೆಗಾರರಲ್ಲ. ನಾವು ಎಚ್ಚರಿಕೆಯಿಂದ ಇರಬೇಕು ಎನ್ನುವುದು ಕಥೆಯ ಸಾರಾಂಶ. ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಮೇಲಿನ ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯದಲ್ಲೇ ಈ ಹಾಡಿನ ಚಿತ್ರೀಕರಣ ನಡೆಯಲಿದೆ. ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಲಿದೆ.

ಎರಡು ಹಾಡುಗಳಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಹಾಗೂ ನಾಗು ಸಂಗೀತ ನೀಡಿದ್ದಾರೆ. ರೆಮೋ ಹಾಗೂ ಉಪೇಂದ್ರ ಒಂದೊಂದು ಹಾಡನ್ನು ಹಾಡಿದ್ದಾರೆ. ನವೀನ್ ಮತ್ತು ನಾಗರಾಜ್ ಛಾಯಾಗ್ರಹಣ, ಜೆ.ಜೆ.ಶರ್ಮ ಸಂಕಲನ, ಚಂದ್ರು ಬಂಡೆ, ಜಾಗ್ವರ್ ಸಣ್ಣಪ್ಪ ಸಾಹಸ ನಿರ್ದೇಶನ ಹಾಗೂ ಸ್ಟಾರ್ ನಾಗಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಸಿದ್ದೇಶ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಪ್ರಿಯದರ್ಶಿನಿ. ವಿನೋದ್, ರಚನಾ ಮಲ್ನಾಡ್, ಲಯ ಕೋಕಿಲ, ಡಿಂಗ್ರಿ ನಾಗರಾಜ್, ಪುಷ್ಪಸ್ವಾಮಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಸತೀಶ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT