ಸ್ಕಂದ ನಟನೆಯ ‘ಫ್ಲಾಟ್ #9’ ಸಿನಿಮಾದ ಫಸ್ಟ್‌ಲುಕ್ ಬಿಡುಗಡೆ

ನಟ ಸ್ಕಂದ ಅಶೋಕ್ ತಮ್ಮ ಮುಂದಿನ ‘ಫ್ಲಾಟ್ #9’ ಚಿತ್ರದ ಫಸ್ಟ್‌ಲುಕ್ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಸ್ಕಂದ ಹಂಚಿಕೊಂಡಿರುವ ಈ ಪೋಸ್ಟರ್ ಸಿನಿಮಾದ ಮೇಲೆ ನಿರೀಕ್ಷೆ ಹುಟ್ಟುವಂತೆ ಮಾಡಿದೆ. ಪೋಸ್ಟರ್ ನೋಡಿದರೆ ಇದು ಥ್ರಿಲ್ಲರ್ ಚಿತ್ರ ಎನ್ನಿಸುವಂತಿದೆ. ಈ ಚಿತ್ರದಲ್ಲಿ ತೇಜಸ್ವಿನಿ ಶರ್ಮಾ, ಚಂದು ಗೌಡ ಮೊದಲಾದವರು ನಟಿಸಿದ್ದಾರೆ.
ಕಿಶೋರ್ ನಿರ್ದೇಶನದ ಈ ಸಿನಿಮಾಕ್ಕೆ ದಿನೇಶ್ ಕುಮಾರ್ ಸಂಗೀತ ನೀಡಿದ್ದಾರೆ. ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಚಿತ್ರೀಕರಣ ನಡೆಸಿತ್ತು ಚಿತ್ರತಂಡ.
ಇದರೊಂದಿಗೆ ಸ್ಕಂದ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ‘ಕಸ್ತೂರಿ ಮಹಲ್’ನಲ್ಲೂ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆದಿತ್ತು. ಶ್ವಾನಿ ಶ್ರೀವಾಸ್ತವ್ ಹಾಗೂ ಶೃತಿ ಪ್ರಕಾಶ್ ಜೊತೆ ಸ್ಕಂದ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಫಿಲ್ಮಮೇಕರ್ ಪಾತ್ರದಲ್ಲಿ ಸ್ಕಂದ ಕಾಣಿಸಲಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.