ಭಾನುವಾರ, ಫೆಬ್ರವರಿ 5, 2023
21 °C

ಎಸ್‌ಎಲ್‌ವಿ ಟೀಸರ್‌ ಬಿಡುಗಡೆ ಮಾಡಿದ್ರು ರಮೇಶ್‌ ಅರವಿಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೌರಭ್ ಕುಲಕರ್ಣಿ ನಿರ್ದೇಶನದ ‘ಸಿರಿ ಲಂಬೋದರ ವಿವಾಹ’ (ಎಸ್ಎಲ್‌ವಿ) ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಖ್ಯಾತ ನಟ ರಮೇಶ್ ಅರವಿಂದ್ ಟೀಸರ್ ಬಿಡುಗಡೆ ಮಾಡಿದರು. ಟೀಸರ್ ಎ2 ಮ್ಯೂಸಿಕ್‌ ಯುಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ.

‘ಎಸ್ಎಲ್‌ವಿ ಬಿಡುಗಡೆಗೆ ಸಿದ್ಧವಾಗಿದೆ. ರಂಗಭೂಮಿ ಕಲಾವಿದರೇ ಹೆಚ್ಚಾಗಿ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಈಗ ಟೀಸರ್ ಬಿಡುಗಡೆ ಮಾಡಿದ್ದೇವೆ. ಇನ್ನೆರಡು ತಿಂಗಳಲ್ಲಿ ಚಿತ್ರವನ್ನು ನಿಮ್ಮ ಮುಂದೆ ತರುತ್ತೇವೆ. ಡಿಸೆಂಬರ್ ನಲ್ಲಿ ಓಮನ್ ಹಾಗೂ ದುಬೈ ದೇಶಗಳಲ್ಲಿ ನಮ್ಮ ಚಿತ್ರದ ಪ್ರೀಮಿಯರ್ ನಡೆಯಲಿದೆ’ ಎಂದರು ನಿರ್ದೇಶಕ ಸೌರಭ್‌ ಕುಲಕರ್ಣಿ. 

‘ಸಿರಿ ಹಾಗೂ ಲಂಬೋದರ ಈ ಚಿತ್ರದ ನಾಯಕಿ, ನಾಯಕ ಅಲ್ಲ. ಅವರು ಯಾರೆಂದು ತಿಳಿಯಲು ಚಿತ್ರ ನೋಡಬೇಕು. ನಾನು ಸೇರಿದಂತೆ ಅನೇಕ ಸಿನಿಮಾಸಕ್ತರು ಸೇರಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇವೆ. ಟೀಸರ್ ಬಿಡುಗಡೆ ಮಾಡಿದ ರಮೇಶ್ ಅರವಿಂದ್ ಅವರಿಗೆ ಧನ್ಯವಾದ’ ಎಂದರು ಸೌರಭ್ ಕುಲಕರ್ಣಿ.

ನಾಯಕ ಅಂಜನ್‌ ಎ. ಭಾರಧ್ವಾಜ್‌ ಈ ಚಿತ್ರದಲ್ಲಿ ಮದುವೆ ಪ್ಲ್ಯಾನರ್‌ ಆಗಿ ಕಾಣಿಸಿಕೊಂಡಿದ್ದಾರೆ. ದಿಶಾ ರಮೇಶ್‌ ನಾಯಕಿ. ಸುಂದರ್‌ ವೀಣಾ, ರಾಜೇಶ್ ನಟರಂಗ, ಪಿ.ಡಿ.ಸತೀಶ್ ಚಂದ್ರ, ಮಜಾಭಾರತದ ಶಿವು ಹಾಗೂ ಸುಶ್ಮಿತ, ಸದಾನಂದ ಕಾಳೆ ತಾರಾಗಣದಲ್ಲಿದ್ದಾರೆ. 

ವೆರ್ಸತೋ ವೆಂಚರ್ಸ್‌, ಪವಮಾನ ಕ್ರಿಯೇಷನ್ಸ್‌, ಫೋರೆಸ್‌ ನೆಟ್‌ವರ್ಕ್‌ ಮತ್ತು ಧುಪದ ದೃಶ್ಯ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು