ಮುಂಬೈ: 2025ರ ನವೆಂಬರ್ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ಚೊಚ್ಚಲ ಐಸಿಸಿ ಏಕದಿನ ವಿಶ್ವಕಪ್ ಗೆದ್ದ ಬಳಿಕ, ಮಹಿಳಾ ತಂಡದ ಉಪನಾಯಕಿ ಸ್ಮೃತಿ ಮಂದಾನ ಅವರು ತಮ್ಮ ಬಹುಕಾಲದ ಗೆಳೆಯ, ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಅವರ ಜೊತೆ ಮದುವೆಯಾಗಲು ಸಿದ್ಧವಾಗಿದ್ದರು. ಆದರೆ, ಮದುವೆಗೆ ಒಂದು ದಿನ ಮೊದಲು ಇಬ್ಬರ ಸಂಬಂಧದಲ್ಲಿ ಬಿರುಕು ಉಂಟಾಗಿ ರದ್ದಾಗಿತ್ತು.

ಆರಂಭದಲ್ಲಿ ಸ್ಮೃತಿ ಅವರ ತಂದೆ ಶ್ರೀನಿವಾಸ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರಿಂದ ಮದುವೆ ಮುಂದೂಡಲಾಯಿತು ಎಂದು ಹೇಳಲಾಯಿತು. ಬಳಿಕ ಪಲಾಶ್ ಅವರ ಆರೋಗ್ಯ ಸರಿ ಇಲ್ಲ ಎಂದು ವರದಿಯಾಯಿತು. ಆದರೆ, ನಂತರದ ದಿನಗಳಲ್ಲಿ ಮುಚ್ಚಲ್ ಅವರು ಸ್ಮೃತಿ ಮಂಧಾನ ಅವರಿಗೆ ದಾಂಪತ್ಯ ದ್ರೋಹ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ನಂತರದ ದಿನಗಳಲ್ಲಿ ಸ್ಮೃತಿ ಮಂದಾನ ಮತ್ತು ಪಲಾಶ್ ಮುಚ್ಚಲ್ ಇಬ್ಬರೂ ಕೂಡ ತಮ್ಮ ಸಂಬಂಧವನ್ನು ಕೊನೆಗೊಳಿಸುವುದಾಗಿ ಅಧಿಕೃತವಾಗಿ ಹೇಳಿಕೆ ನೀಡಿದ್ದರು. ಇದರ ಹೊರತಾಗಿಯೂ, ಉಭಯ ಕುಟುಂಬಗಳ ಸದಸ್ಯರು ಅನ್ಯೋನ್ಯವಾಗಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಸದ್ಯ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವಿಡಿಯೊದಲ್ಲಿ ಸ್ಮೃತಿ ಮಂದಾನ ಅವರ ತಂದೆ ಶ್ರೀನಿವಾಸ್, ಪಲಾಶ್ ಮುಚ್ಚಲ್ ಅವರ ಸಹೋದರಿ ಪಲಕ್ ಮುಚ್ಚಲ್ ಮತ್ತು ಆಕೆಯ ಪತಿ ಮಿಥುನ್ ಅವರೊಂದಿಗೆ ಮುಂಬೈ ಹೋಟೆಲ್ ಒಂದರ ಹೊರಗೆ ಇರುವುದನ್ನು ಕಾಣಬಹುದು. ಮಾತ್ರವಲ್ಲ, ಪಲಕ್ ಅವರು ಹೊರಡುವುದಕ್ಕೆ ಮುನ್ನ ಸ್ಮೃತಿ ತಂದೆ ಶ್ರೀನಿವಾಸ್ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಹುಟ್ಟುಹಾಕಿದೆ. ಅನೇಕರು ಪಲಾಶ್ ಹಾಗೂ ಸ್ಮೃತಿ ಮತ್ತೆ ಒಂದಾಗಲಿದ್ದಾರೆ ಎಂದು ಹೇಳಿದರೆ, ಇನ್ನೂ ಕೆಲವರು ಇದು ಹಳೆಯ ವಿಡಿಯೊ ಎಂದು ವದಂತಿಗಳನ್ನು ತಳ್ಳಿಹಾಕಿದ್ದಾರೆ. ಇನ್ನೂ ಈ ವಿಡಿಯೊದ ಕುರಿತು ಪಲಾಶ್ ಅಥವಾ ಸ್ಮೃತಿ ಮಂಧಾನ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.