ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಹುಕಾಲದ ಗೆಳೆಯನೊಂದಿಗೆ ಹಸೆಮಣೆ ಏರಲು ಸಜ್ಜಾದ ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ

Published 12 ಜೂನ್ 2024, 5:34 IST
Last Updated 12 ಜೂನ್ 2024, 5:34 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್‌ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಬಹುಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ ಅವರೊಂದಿಗೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.

ನೆಟ್‌ಫ್ಲಿಕ್ಸ್‌ನಲ್ಲಿ ‘ಹೀರಾಮಂಡಿ: ದಿ ಡೈಮಂಡ್ ಬಜಾರ್’ ವೆಬ್‌ ಸರಣಿ ಬಿಡುಗಡೆಗೊಂಡ ಬಳಿಕ ಮದುವೆಯ ಸುದ್ದಿ ಹೊರಬಿದ್ದಿದೆ. ಇದರಲ್ಲಿ ಸೋನಾಕ್ಷಿ ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. 

ಮದುವೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳಿಲ್ಲ. ಆದರೆ ಸೋನಾಕ್ಷಿ ಅವರ ಕುಟುಂಬದ ಆಪ್ತ ಮೂಲಗಳು ‘ವರದಿಗಳು ನಿಜ’ ಎಂದಿವೆ ಎಂದು ಪಿಟಿಐ ವರದಿ ತಿಳಿಸಿದೆ.

ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತ ಬಳಗ ಮಾತ್ರ ಭಾಗಿಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಜೂನ್‌ 23ರಂದು ಮದುವೆ ನಡೆಯಲಿದೆ ಎನ್ನಲಾಗಿದೆ.

ಸೋನಾಕ್ಷಿ ಮತ್ತು ಇಕ್ಬಾಲ್‌ 2022ರಲ್ಲಿ ಬಿಡುಗಡೆಯಾದ ‘ಡಬಲ್‌ ಎಕ್ಸ್‌ಎಲ್‌’ ಚಿತ್ರದಲ್ಲಿ ನಟಿಸಿದ್ದರು. ಆಗಿನಿಂದ ಡೇಟಿಂಗ್‌ ಮಾಡುತ್ತಿದ್ದರು ಎನ್ನಲಾಗಿದೆ.

ಇವರಿಬ್ಬರು ತಮ್ಮ ಸಂಬಂಧದ ಬಗ್ಗೆ ಸಾರ್ವಜನಿಕವಾಗಿ ದೃಢಪಡಿಸಿಲ್ಲ. ಆದರೆ ಹಲವು ಕಾರ್ಯಕ್ರಮಗಳಲ್ಲಿ ಒಟ್ಟಿಗೆ ಕಾಣಸಿಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT