ಮಂಗಳವಾರ, ಆಗಸ್ಟ್ 16, 2022
29 °C

ಮೊದಲ ಮಗುವಿನ ನಿರೀಕ್ಷೆ: ಬೇಬಿ ಬಂಪ್ ಫೋಟೊ ಹಂಚಿಕೊಂಡ ನಟಿ ಸೋನಮ್‌ ಕಪೂರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಲಿವುಡ್‌ ನಟಿ ಸೋನಮ್‌ ಕಪೂರ್‌ ಅವರು ಬೇಬಿ ಬಂಪ್ ಫೋಟೊಶೂಟ್‌ ಮಾಡಿಸಿದ್ದು, ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಸೋನಮ್‌ ಹಾಗೂ ಆನಂದ್‌ ಅಹುಜಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ದಂಪತಿ 2018ರಲ್ಲಿ ವಿವಾಹವಾಗಿತ್ತು.

ಈ ಕುರಿತು ಇನ್ಸ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಮಗು ಆಗಮನದ ನಿರೀಕ್ಷೆಯನ್ನು ತಡೆಯಲಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.

ಸೋನಮ್ ಪತಿ ಆನಂದ್‌ ಅಹುಜಾ ಅವರು ಉದ್ಯಮಿಯಾಗಿದ್ದಾರೆ. ಇವರು ರಫ್ತು–ಆಮದು ವ್ಯವಹಾರದಲ್ಲಿ ತೊಡಗಿಕೊಂಡಿದ್ದಾರೆ. 

ಸೋನಮ್‌ ಅವರು ಮದುವೆಯ ಬಳಿಕ ಸಿನಿಮಾರಂಗದಿಂದ ದೂರ ಉಳಿದಿದ್ದಾರೆ. 2018ರಿಂದ ಇಲ್ಲಿಯವರೆಗೂ ಅವರು ಎರಡು ಮೂರು ಸಿನಿಮಾಗಳಲ್ಲಿ ಮಾತ್ರ ನಟಿಸಿದ್ದಾರೆ. ಬೇಬಿ ಬಂಪ್‌ ಪೋಟೊಶೂಟ್‌ ಮೂಲಕ ಅವರು ಗರ್ಭೀಣಿಯಾಗಿರುವ ವಿಚಾರವನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬೇಬಿ ಬಂಪ್‌ ಫೋಟೊ ಹರಿದಾಡುತ್ತಿದೆ. ಅಭಿಮಾನಿಗಳು ಸೋನಮ್‌ಗೆ ಶುಭಾಶಯಗಳನ್ನು ಹೇಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು