ಬುಧವಾರ, ಅಕ್ಟೋಬರ್ 5, 2022
27 °C

ಜಾರಿ ಬಿದ್ದರೂ ಯಾಕೀ ನಗು: 'ಕಂಬ್ಳಿಹುಳ' ಸಿನಿಮಾದ ಹಾಡು ಬಿಡುಗಡೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚಂದನವನದಲ್ಲಿ 'ಕಂಬ್ಳಿಹುಳ' ಸಿನಿಮಾದ ಮೊದಲ ಹಾಡು ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆಯಾಗಿದೆ. ಹಾಡಿಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

'ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು...' ಈ ಹಾಡನ್ನು ಯುಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಕೆಲವೇ ಗಂಟೆಗಳಲ್ಲಿ ಹಾಡು ಸಾವಿರಾರು ವೀಕ್ಷಣೆ ಕಂಡಿದೆ. ಗಾಯಕ ವಿಜಯ ಪ್ರಕಾಶ್, ಗಾಯಕಿ ಸಂಗೀತ ರವೀಂದ್ರನಾಥ್ ಅವರು ಸುಮಧುರವಾಗಿ ಹಾಡಿದ್ದಾರೆ. ಶಿವಪ್ರಸಾದ್ ಅವರ ಸಂಗೀತ ಇಂಪಾಗಿದೆ.

ಹಾಡಿನ ಮಧ್ಯೆ ಬರುವ ಸಂಭಾಷಣೆಗಳು ಹಾಗೂ ಕೋರಸ್ ಹಾಡನ್ನು ಮತ್ತಷ್ಟು ಸುಂದರಗೊಳಿಸಿದೆ. ಹಾಡಿನಲ್ಲಿ ಹಾಗೂ ಸಿನಿಮಾದಲ್ಲಿ ಮಲೆನಾಡಿನ ಚಿತ್ರಣವನ್ನು ಕಟ್ಟಿಕೊಡಲಾಗಿದೆ ಎಂದು ಚಿತ್ರತಂಡ ಹೇಳಿದೆ.

ಇದನ್ನೂ ಓದಿ: ₹200 ಕೋಟಿ ವಂಚನೆ ಪ್ರಕರಣ: ನಟಿ ಜಾಕ್ವೆಲಿನ್ ಆರೋಪಿ, ಇಂದು ಚಾರ್ಜ್ ಶೀಟ್ ಸಲ್ಲಿಕೆ

ಗ್ರೇ ಸ್ಕ್ವೇರ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ಮೂಡಿ ಬಂದಿದೆ. ಸವೀನ್, ಪುನೀತ್, ಗುರು, ವಿಜಯ್ ಬಂಡವಾಳ ಹೂಡಿದ್ದಾರೆ. ಸತೀಶ್ ರಾಜೇಂದ್ರ ಛಾಯಾಗ್ರಾಹಕರಾಗಿದ್ದು, ಜಿತೇಂದ್ರ ನಾಯಕ, ರಾಘವೇಂದ್ರ ಟಿಕೆ ಸಂಕಲನಕಾರರಾಗಿ ಶ್ರಮಿಸಿದ್ದಾರೆ.

ಇದನ್ನೂ ಓದಿ: ತಾಯಿಯಾಗುತ್ತಿರುವ ಸಂಭ್ರಮದಲ್ಲಿ ಬಿಪಾಶಾ ಬಸು: ‘ಬೇಬಿ ಬಂಪ್‘ ಫೋಟೊ ಹಂಚಿಕೊಂಡ ನಟಿ

ಸಿನಿಮಾ ತಂಡದಲ್ಲಿ ರೋಹಿತ್ ಕುಮಾರ್, ದೀಪಕ್ ರೈ ಪಣಜೆ, ಸಂಧ್ಯಾ ಅರಕೆರೆ ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಈ ಹಿಂದೆ ಜೋಡಿ ಕುದುರೆ, ಗೋಣಿ ಚೀಲ ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದ ನವನ್ ಶ್ರೀನಿವಾಸ್ 'ಕಂಬ್ಳಿಹುಳ' ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

ಇವುಗಳನ್ನೂ ಓದಿ

ಧನಂಜಯ್‌, ರಚಿತಾ ನಟನೆಯ ‘ಮಾನ್ಸೂನ್‌ ರಾಗ’ ರಿಲೀಸ್‌ ಮುಂದಕ್ಕೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು