ಭಾನುವಾರ, ಸೆಪ್ಟೆಂಬರ್ 26, 2021
25 °C

ಸ್ಥಳೀಯ ವ್ಯಾಪಾರಿಗಳನ್ನು ಬೆಂಬಲಿಸಲು ಸೋನು ಸೂದ್‌ ಕರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ಸೋನು ಸೂದ್‌ ಸ್ಥಳೀಯ ವ್ಯಾಪಾರಿಗಳನ್ನು ಬೆಂಬಲಿಸಬೇಕು ಎಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಹೇಳಿದ್ದಾರೆ. 

ಇತ್ತೀಚೆಗೆ ಸೋನು ಸೂದ್‌ ಜಮ್ಮ ಮತ್ತು ಕಾಶ್ಮಿರಕ್ಕೆ ಭೇಟಿ ನೀಡಿದ್ದರು. ಶ್ರೀನಗರದಲ್ಲಿ ಫುಟ್‌ಪಾತ್‌ ಮೇಲೆ ವ್ಯಾಪಾರ ಮಾಡುವವರ ಬಳಿ ಸರಕುಗಳನ್ನು ಖರೀದಿಸಿ, ಸ್ಥಳೀಯ ವ್ಯಾಪಾರಿಗಳನ್ನು ಬೆಂಬಲಿಸುವ ಮೂಲಕ ಅವರನ್ನು ಬೆಳೆಸಬೇಕು ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ಲಾಕ್‌ಡೌನ್‌ ಸಮಯದಲ್ಲಿ ಬಡವರಿಗೆ ನೆರವು ನೀಡುವ ಮೂಲಕ ಸೋನು ಸೂದ್‌ ದೇಶದಾದ್ಯಂತ ಸುದ್ದಿಯಾಗಿದ್ದರು. ಅವರ ನೆರವಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿತ್ತು.

ಶ್ರೀನಗರದ ಗಲ್ಲಿಯೊಂದರಲ್ಲಿ ಚಪ್ಪಲಿ ಮಾರಾಟ ಮಾಡುವ ಶಮೀರ್‌ ಎಂಬುವರನ್ನು ಭೇಟಿ ಮಾಡಿ, ಒಂದು ಜೊತೆ ಚಪ್ಪಲಿ ಖರೀದಿಸಿ ಶೇ 20 ರಷ್ಟು ರಿಯಾಯ್ತಿ ಪಡೆದರು.  ನೀವು ಕೂಡ ಇಲ್ಲಿಗೆ ಬಂದು ಚಪ್ಪಲಿ ಖರೀದಿಸಿ, ನನ್ನ ಹೆಸರು ಹೇಳಿ ಶೇ.20ರಷ್ಟು ರಿಯಾಯ್ತಿ ಪಡೆಯಿರಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡುವ ಮೂಲಕ ಹಾಸ್ಯ ಚಟಾಕಿ ಹಾರಿಸಿದರು.

ಈ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಇದು ನಮ್ಮ ಚಪ್ಪಲಿ ಶೋರೂಂ, ಶೇ. 20ರಷ್ಟು ರಿಯಾಯಿತಿ ಪಡೆಯಿರಿ ಎಂದು ಬರೆದುಕೊಂಡಿದ್ದಾರೆ.

ಸ್ಥಳೀಯ ವ್ಯಾಪಾರಿಗಳ ಬಳಿ ಸರಕುಗಳನ್ನು ಕೊಂಡು ಅವರನ್ನು ನಾವು ಬೆಳೆಸಬೇಕು ಎಂದು ಸೋನು ಸೂದ್‌ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು