ಸೋಮವಾರ, ಅಕ್ಟೋಬರ್ 18, 2021
25 °C

ಅಫ್ಗಾನಿಸ್ತಾನಕ್ಕೆ ನಮ್ಮ ನೆರವಿನ ಅಗತ್ಯವಿದೆ: ನಟ ಸೋನು ಸೂದ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಅಫ್ಗಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರು ಸೇರಿದಂತೆ ಅಲ್ಲಿನ ಜನರಿಗೆ ನಮ್ಮ ನೆರವಿನ ಅಗತ್ಯವಿದೆ ಎಂದು ಬಾಲಿವುಡ್‌ ನಟ ಸೋನು ಸೂದ್‌ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಸದ್ಯ ಅಫ್ಗಾನಿಸ್ತಾನ ತಾಲಿಬಾನ್‌ ಕೈವಶದಲ್ಲಿದ್ದು, ಅಲ್ಲಿನ ಜನ ಉದ್ಯೋಗ, ಮನೆಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತೀಯರು ಸೇರಿದಂತೆ ಅಲ್ಲಿನ ಜನರ ನೆರವಿಗೆ ಎಲ್ಲರೂ ಧಾವಿಸಬೇಕು’ ಎಂದು ಕರೆ ನೀಡಿದ್ದಾರೆ.  

ಅಘ್ಗಾನಿಸ್ತಾನದ ಜನರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಇಡೀ ಜಗತ್ತು ಬೆಂಬಲ ನೀಡಬೇಕಿದೆ ಎಂದು ಸೂದ್‌  ಮನವಿ ಮಾಡಿದ್ದಾರೆ.

ತಾಲಿಬಾನಿಗಳು ಕಾಬೂಲ್ ಸಮೀಪಿಸುತ್ತಿದ್ದಂತೆಯೇ ಆಘ್ಗಾನ್‌ ಅಧ್ಯಕ್ಷ ಅಶ್ರಫ್‌ ಘನಿ ದೇಶ ತೊರೆದಿದ್ದಾರೆ. ಸದ್ಯ ಅಫ್ಗಾನಿಸ್ತಾನದ ಮೇಲೆ ಹಿಡಿತ ಸಾಧಿಸಿರುವ ತಾಲಿಬಾನ್‌ ಶರಿಯಾ ಕಾನೂನಿನ ಅಡಿಯಲ್ಲಿ ಹಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.

ಅಫ್ಗಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರನ್ನು ವಾಪಸ್‌ ಕರೆತರುವ ಕೇಂದ್ರ ಸರ್ಕಾರ ಮುಂದಾಗಿದೆ. ಅಫ್ಗಾನಿಸ್ತಾನದ ಕಾಬೂಲ್‌ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಮಾನದ ಮೂಲಕ ಭಾನುವಾರ 168 ಮಂದಿಯನ್ನು ದೇಶಕ್ಕೆ ಕರೆತರಲಾಗಿದೆ. ಇದರಲ್ಲಿ 107 ಮಂದಿ ಭಾರತೀಯರಿದ್ದಾರೆ.

ಇದನ್ನೂ ಓದಿ... 107 ಭಾರತೀಯರೂ ಸೇರಿ 168 ಮಂದಿ ಅಫ್ಗಾನಿಸ್ತಾನದಿಂದ ವಾಪಸ್

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು