ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಗೆಳತಿಗೆ ಐಪೋನ್‌ ಕೊಡಿಸಿ ಎಂದ ಯುವಕನಿಗೆ ಸೋನು ಸೂದ್‌ ಕೊಟ್ಟ ಉತ್ತರ ಏನು?

Last Updated 22 ಜೂನ್ 2021, 12:43 IST
ಅಕ್ಷರ ಗಾತ್ರ

ಬಾಲಿವುಡ್‌ ನಟ ಸೋನು ಸೂದ್‌ ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುತ್ತಲೇ ರಿಯಲ್‌ ಹಿರೋ ಎಂಬ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ.

ಇತ್ತೀಚಿಗೆ ನೆಟ್ಟಿಗರೊಬ್ಬರು, ಬ್ರದರ್‌, ನನ್ನ ಗೆಳತಿಗೆ ಒಂದು ಐಫೋನ್‌ ಕೊಡಿಸುವಿರಾ? ಎಂದು ಕೇಳಿದ್ದಾರೆ. ಇದಕ್ಕೆ ಸೋನು ಸೂದ್‌ ತಮಾಷೆಯಾಗಿಯೇ ಉತ್ತರ ಕೊಟ್ಟಿದ್ದಾರೆ.

ನಿಮ್ಮ ಗೆಳತಿ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಒಂದು ವೇಳೆ ಅವರಿಗೆ ಐಫೋನ್ ಕೊಡಿಸಿದರೆ, ನಿಮಗೆ ಯಾವುದೇ ರೀತಿಯ ಪ್ರಯೋಜನವಾಗುವುದಿಲ್ಲವಲ್ಲಾ? ಎಂದು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ.

ಸೋನು ಸೂದ್‌ ಪ್ರತಿಕ್ರಿಯೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಗೆಳತಿಗಾಗಿ ಐಫೋನ್‌ ಕೇಳಿದ ಯುವಕನನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಯಾವುದನ್ನು ಕೇಳಿ ಪಡೆಯಬೇಕು ಎಂಬುದು ತಿಳಿಯುತ್ತಿಲ್ಲವೇ ಎಂದು ಕೆಲವರು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇನ್ನು ಕೆಲವರು ಮನಸ್ಸಿಗೆ ಬಂದ ಹಾಗೇ ಸಹಾಯ ಕೇಳಬಾರದು ಎಂದು ಕೆಲವರು ಸಲಹೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT