ಬುಧವಾರ, ಜೂನ್ 23, 2021
22 °C

ಅನುಮತಿ ಪಡೆಯದೆ ಹೋಟೆಲ್‌ ನಿರ್ಮಾಣ ಆರೋಪ: ಸುಪ್ರೀಂ ಕೋರ್ಟ್ ಮೊರೆ ಹೋದ ಸೋನು ಸೂದ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಜುಹೂ ಪ್ರದೇಶದಲ್ಲಿರುವ ತಮ್ಮ ವಸತಿ ಕಟ್ಟಡಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಬಾಲಿವುಡ್‌ ನಟ ಸೋನು ಸೂದ್‌ ಅವರು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಓದಿ: ಅನುಮತಿ ‍ಪಡೆಯದೇ ಹೋಟೆಲ್ ನಿರ್ಮಾಣ: ನಟ ಸೋನು ಸೂದ್ ವಿರುದ್ಧ ದೂರು ದಾಖಲು

ಜುಹೂ ಪ್ರದೇಶದಲ್ಲಿ ವಸತಿ ಕಟ್ಟಡವೊಂದನ್ನು ಅನುಮತಿ ಪಡೆಯದೆ ಹೋಟೆಲ್‌ ಆಗಿ ಪರಿವರ್ತಿಸಿದ ಆರೋಪದಡಿ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯು(ಬಿಎಂಸಿ)ಸೋನು ಸೂದ್‌ ಅವರಿಗೆ ನೋಟಿಸ್‌ ಕಳುಹಿಸಿತ್ತು. ಇದನ್ನು ರದ್ದುಗೊಳಿಸಬೇಕು ಎಂದು ಕೋರಿ ಅವರು ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಾಂಬೆ ಹೈಕೋರ್ಟ್‌ ಅವರ ಅರ್ಜಿಯನ್ನು ವಜಾಗೊಳಿಸಿತ್ತು.

ಸದ್ಯ ಬಾಂಬೆ ಹೈಕೋರ್ಟ್‌ನ ಈ ತೀರ್ಪನ್ನು ಪ್ರಶ್ನಿಸಿ ಸೋನು ಸೂದ್‌, ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು