ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದುಬೈನಲ್ಲಿ ವ್ಯಕ್ತಿಯ ಜೀವ ಉಳಿಸಲು ನೆರವಾದ ನಟ ಸೋನು ಸೂದ್: ಭಾರಿ ಮೆಚ್ಚುಗೆ

Last Updated 19 ಜನವರಿ 2023, 10:00 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್ ನಟ ಸೋನು ಸೂದ್ ಅವರು ತಮ್ಮ ಸಾಮಾಜಿಕ ಕೆಲಸಗಳ ಮೂಲಕ ಜನರ ಮನ ಗೆದ್ದಿದ್ದಾರೆ.

ಇತ್ತೀಚೆಗೆ ದುಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಗೆ ನೆರವಾಗುವ ಮೂಲಕ ಸೋನು ಮತ್ತೊಮ್ಮೆ ಗಮನ ಸೆಳೆದಿದ್ದಾರೆ.

ಸೋನು ಸೂದ್‌ ಭಾರತಕ್ಕೆ ಹಿಂತಿರುಗಲು ದುಬೈ ವಿಮಾನ ನಿಲ್ದಾಣದಲ್ಲಿ ನಿಂತಿದ್ದರು. ಇದೇ ವೇಳೆ ವ್ಯಕ್ತಿಯೊಬ್ಬರು ಪ್ರಜ್ಞೆ ಕಳೆದುಕೊಂಡು ಸ್ಥಳದಲ್ಲೇ ಮೂರ್ಛೆ ಹೋಗಿದ್ದರು. ಸ್ಥಳದಲ್ಲಿದ್ದ ಸೋನು ಕೂಡಲೇ ಆ ವ್ಯಕ್ತಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಆ ವ್ಯಕ್ತಿಗೆ ಪ್ರಜ್ಞೆ ಬಂದಿದ್ದು, ತಮ್ಮ ಜೀವ ಉಳಿಸಿದ್ದಕ್ಕಾಗಿ ಸೋನು ಸೂದ್‌ಗೆ ಧನ್ಯವಾದ ಸಲ್ಲಿಸಿದ್ದಾರೆ.

ಸೂದ್‌ ಅವರ ಸಾಮಾಜಿಕ ಕಳಕಳಿಗೆ ಸ್ಥಳದಲ್ಲಿದ್ದ ಅಧಿಕಾರಿಗಳು, ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೋನು ಸೂದ್‌ ಅವರು ಕೋವಿಡ್‌ ಸಾಂಕ್ರಾಮಿಕ ಮತ್ತು ಲಾಕ್‌ಡೌನ್‌ ಅವಧಿಯಲ್ಲಿ ಸಾರ್ವಜನಿಕರಿಗೆ ನೆರವಿನ ಹಸ್ತ ಚಾಚುವ ಮೂಲಕ ಸುದ್ದಿಯಾಗಿದ್ದರು.

ವೈಭವ್ ಮಿಶ್ರಾ ನಿರ್ದೇಶನದ ಆ್ಯಕ್ಷನ್ ಥ್ರಿಲ್ಲರ್ ‘ಫತೇಹ್’ ಸಿನಿಮಾದಲ್ಲಿ ಸೋನು ಸೂದ್ ನಟಿಸುತ್ತಿದ್ದು, ಚಿತ್ರ ಇದೇ ವರ್ಷ ತೆರೆ ಕಾಣಲಿದೆ.

ಇದನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT