ಶುಕ್ರವಾರ, ಫೆಬ್ರವರಿ 21, 2020
22 °C

ಕನ್ನಡಕ್ಕೂ ಬರಲಿದೆ ಕ್ಯಾ.ಗೋಪಿನಾಥ್‌ ಜೀವನಾಧರಿತ ತಮಿಳು ಸಿನಿಮಾ 'ಸೂರರೈ ಪೊಟ್ರು‘

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಕನ್ನಡಿಗ ಕ್ಯಾ. ಗೋಪಿನಾಥ್‌ ಜೀವನಾಧರಿತ 'ಸೂರರೈ ಪೊಟ್ರು' ತಮಿಳು ಸಿನಿಮಾ ನಿರ್ಮಾಣವಾಗುತ್ತಿದ್ದು ಈ ಸಿನಿಮಾ ಕನ್ನಡದಲ್ಲೂ ಬರಲಿದೆ ಎಂದು ಚಿತ್ರತಂಡ ಹೇಳಿದೆ. 

ಖ್ಯಾತ ನಟ ಸೂರ್ಯ ಕ್ಯಾ. ಗೋಪಿನಾಥ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಈ ಚಿತ್ರವನ್ನು ಸುಧಾ ಕೊಂಗಾರ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಪೋಸ್ಟರ್‌ ಮತ್ತು ಟೀಸರ್‌ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ. 

ಕನ್ನಡಿಗ ಕ್ಯಾ. ಗೋಪಿನಾಥ್‌ ಅವರು ಸಾಮಾನ್ಯ ಕುಟುಂಬದಲ್ಲಿ ಹುಟ್ಟಿ, ಸೇನೆಯಲ್ಲಿ ಸೇವೆ ಸಲ್ಲಿಸುತ್ತಾರೆ. ನಂತರ ವಿಮಾನಯಾನ ಸಂಸ್ಥೆ ಆರಂಭಿಸುವ ಮೂಲಕ ಹಲವರಿಗೆ ಸ್ಫೂರ್ತಿಯಾಗುತ್ತಾರೆ. ಯುವಜನರಲ್ಲಿ ಸ್ಪೂರ್ತಿ ತುಂಬುವ ಸಲುವಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿದೆ. 

ಈ ಸಿನಿಮಾ ಕನ್ನಡಕ್ಕೂ ಡಬ್‌ ಆಗಲಿದೆ ಎಂದು 'ಸೂರರೈ ಪೊಟ್ರು‘ ಸಿನಿಮಾ ನಿರ್ಮಾಣ ಸಂಸ್ಥೆ ಟ್ವೀಟ್‌ ಮಾಡಿದೆ. 

ಅಪರ್ಣಾ ಬಾಲಮುರಳಿ, ಮೋಹನ್‌ ಬಾಬು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಜಿ.ವಿ.ಪ್ರಕಾಶ್‌ ಸಂಗೀತ ಸಂಯೋಜನೆ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು