ತಮ್ಮ ನಟನೆಯ ‘ಎಕ್ಕ’ ಸಿನಿಮಾದ ಟೀಸರ್ ಬಿಡುಗಡೆ ಬೆನ್ನಲ್ಲೇ ಯುವ ರಾಜ್ಕುಮಾರ್ ನಟಿಸಲಿರುವ ಹೊಸ ಸಿನಿಮಾದ ಮುಹೂರ್ತ ನಡೆದಿದೆ. ಈ ಬಾರಿ ಯುವಗೆ ಸೂರಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ಇತ್ತೀಚೆಗೆ ನಟ ದುನಿಯಾ ವಿಜಯ್ ಕ್ಲ್ಯಾಪ್ ಮಾಡುವ ಮುಖಾಂತರ ಹೊಸ ಸಿನಿಮಾದ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಇದು ಯುವ ರಾಜ್ಕುಮಾರ್ ನಟನೆಯ ಮೂರನೇ ಸಿನಿಮಾ. ‘ಎಕ್ಕ’ ಸಿನಿಮಾವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾವ್ ಅವರ ಕೆಆರ್ಜಿ ಸ್ಟುಡಿಯೊಸ್, ಜಯಣ್ಣ ಹಾಗೂ ಭೋಗೇಂದ್ರ ಅವರ ಜಯಣ್ಣ ಫಿಲ್ಮ್ಸ್, ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದೆ. ಈ ಪ್ರೊಡಕ್ಷನ್ಸ್ಗಳೇ ಸೇರಿ ಯುವ ನಟನೆಯ ಹೊಸ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿರುವುದು ವಿಶೇಷ.

ಚಿತ್ರದಲ್ಲಿ ಯುವ ರಾಜ್ಕುಮಾರ್ಗೆ ನಾಯಕಿಯಾಗಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ನಟಿಸಲಿದ್ದಾರೆ. ಜಡೇಶ್ ಕೆ.ಹಂಪಿ ನಿರ್ದೇಶಿಸಿರುವ ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಸಿನಿಮಾ ಮೂಲಕ ಚಂದನವಕ್ಕೆ ಹೆಜ್ಜೆ ಇಟ್ಟಿರುವ ರಿತನ್ಯಾಗೆ ಇದು ಎರಡನೇ ಸಿನಿಮಾ. ಚಿತ್ರಕ್ಕೆ ದೀಪು ಎಸ್. ಕುಮಾರ್ ಸಂಕಲನ, ಚರಣ್ ರಾಜ್ ಸಂಗೀತ ನಿರ್ದೇಶನ, ಸಂತೋಷ್ ಕಲಾ ನಿರ್ದೇಶನ, ಶೇಖರ್ ಛಾಯಾಚಿತ್ರಗ್ರಹಣವಿರಲಿದೆ. ಮೇ ತಿಂಗಳಾತ್ಯಂತಕ್ಕೆ ಚಿತ್ರತಂಡ ಚಿತ್ರೀಕರಣ ಪ್ರಾರಂಭಿಸಲಿದೆ. ಬಿಗ್ ಬಜೆಟ್ ಸಿನಿಮಾ ಇದಾಗಿರಲಿದೆ ಎಂದು ಚಿತ್ರತಂಡ ತಿಳಿಸಿದೆ.

ಯುವ ನಟನೆಯ, ರೋಹಿತ್ ಪದಕಿ ನಿರ್ದೇಶಿಸುತ್ತಿರುವ ‘ಎಕ್ಕ’ ಸಿನಿಮಾದ ಶೂಟಿಂಗ್ ಅಂತಿಮ ಹಂತದಲ್ಲಿದ್ದು ಜೂನ್ 6ರಂದು ಈ ಸಿನಿಮಾ ತೆರೆಕಾಣಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.