ಮಂಗಳವಾರ, ಮಾರ್ಚ್ 21, 2023
29 °C

ಫೆ.24ಕ್ಕೆ ಬರಲಿದ್ದಾನೆ ಸೌತ್‌ ಹೀರೊ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಫಸ್ಟ್ ರ‍್ಯಾಂಕ್ ರಾಜು’, ‘ರಾಜು ಕನ್ನಡ ಮೀಡಿಯಂ’ನಂಥ ಹಿಟ್‌ ಚಿತ್ರಗಳನ್ನು ನೀಡಿದ್ದ ನಿರ್ದೇಶಕ ನರೇಶ್‌ ಕುಮಾರ್ ಎಚ್.ಎನ್. ಹೊಸಳ್ಳಿ ಇದೀಗ ಮತ್ತೊಂದು ಸಿನಿಮಾ ಮೂಲಕ ಪ್ರೇಕ್ಷಕರ ಎದುರಿಗೆ ಬರುತ್ತಿದ್ದಾರೆ.

ನರೇಶ್‌ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಆ್ಯಕ್ಷನ್‌ ಕಟ್‌ ಹೇಳಿರುವ ‘ಸೌತ್ ಇಂಡಿಯನ್ ಹೀರೋ’ ಸಿನಿಮಾ ಫೆ.24ರಂದು ತೆರೆಗೆ ಬರಲಿದೆ. ಇತ್ತೀಚೆಗೆ ನಟ ಉಪೇಂದ್ರ ಅವರು ಸಿನಿಮಾದ ಟ್ರೈಲರ್‌ ಬಿಡುಗಡೆಗೊಳಿಸಿದರು. ನಿರ್ದೇಶನದ ಜೊತೆಗೆ ಪತ್ನಿ ಶಿಲ್ಪಾ ಅವರ ಜೊತೆಗೂಡಿ ಚಿತ್ರಕ್ಕೆ ಬಂಡವಾಳವನ್ನೂ ನರೇಶ್‌ ಹೂಡಿದ್ದಾರೆ. ‘ಅವನು ಮತ್ತು ಶ್ರಾವಣಿ’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ನಟ ಸಾರ್ಥಕ್ ಈ ಸಿನಿಮಾದ ನಾಯಕನಾಗಿದ್ದು, ನಾಯಕಿಯರಾಗಿ ಕಾಶಿಮಾ ಹಾಗೂ ಮುಂಬೈ ಮೂಲದ ಊರ್ವಶಿ ನಟಿಸಿದ್ದಾರೆ.

‘ನನ್ನ ನಿರ್ದೇಶನದ 4ನೇ ಚಿತ್ರವಿದು. ಚಿತ್ರದ ನಾಯಕ ಭೌತಶಾಸ್ತ್ರದ ಪ್ರಾಧ್ಯಾಪಕ. ಆತನ ಹೆಸರು ಲಾಜಿಕ್ ಲಕ್ಷ್ಮಣ್‌ ರಾವ್.  ಚಿತ್ರರಂಗದ ಯಾವುದೇ ಸಂಪರ್ಕವಿಲ್ಲದ ಆತ ಹೇಗೆ ಚಿತ್ರರಂಗಕ್ಕೆ ಬರುತ್ತಾನೆ, ಬಂದಮೇಲೆ ಆತ ಎದುರಿಸುವ ಸಂಕಷ್ಟ ಎಂತಹದ್ದು ಎಂಬುದರ ಮೇಲೆ ಚಿತ್ರದ ಕಥೆ ಹೆಣೆಯಲಾಗಿದೆ. ನಾಯಕನ ಪಾತ್ರಕ್ಕೆ ಮೂರು ಶೇಡ್ಸ್‌ ಇವೆ’ ಎನ್ನುತ್ತಾರೆ ನರೇಶ್‌.

ಕಾಶಿಮಾ ಈ ಚಿತ್ರದಲ್ಲಿ ಹಳ್ಳಿಯಲ್ಲಿ ಪಾಠ ಮಾಡುವ ಶಿಕ್ಷಕಿ ‘ಮಾನಸಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದೊಳಗಿನ ಸಿನಿಮಾದ ನಿರ್ದೇಶಕನಾಗಿ ನಟ ವಿಜಯ್ ಚೆಂಡೂರು ನಟಿಸಿದ್ದಾರೆ. ಹರ್ಷವರ್ಧನ್ ಸಂಗೀತ, ರಾಜಶೇಖರ್ ಹಾಗೂ ಪ್ರವೀಣ್ ಎಸ್. ಅವರ ಛಾಯಾಗ್ರಹಣ ಚಿತ್ರಕ್ಕಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.