ಶನಿವಾರ, ಜುಲೈ 24, 2021
27 °C

ಎಸ್‌ಪಿ ಬಾಲಸುಬ್ರಮಣ್ಯಂ ಹುಟ್ಟುಹಬ್ಬದ ಸಂಭ್ರಮಕ್ಕೆ ಟ್ವೀಟ್ ಶುಭಾಶಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

SPB

ಬೆಂಗಳೂರು: ಖ್ಯಾತ ಗಾಯಕ, ಸಂಗೀತ ನಿರ್ದೇಶಕ  ಎಸ್‌.ಪಿ ಬಾಲಸುಬ್ರಮಣ್ಯಂ ಅವರಿಗಿಂದು 74ನೇ ಹುಟ್ಟುಹಬ್ಬದ ಸಂಭ್ರಮ. ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಸೇರಿದಂತೆ ಭಾರತದ 15 ಭಾಷೆಗಳಲ್ಲಿ ಸುಮಾರು 40,000ಕ್ಕಿಂತಲೂ  ಹೆಚ್ಚು ಹಾಡುಗಳನ್ನು ಹಾಡಿರುವ ಗಾಯಕ ಎಸ್‌ಪಿಬಿ. 

ತಮ್ಮ ಇಷ್ಟದ ಗಾಯಕನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಟ್ವಿಟರ್‌ನಲ್ಲಿ ಶುಭಕೋರಿದ್ದು #SPBalasubrahmanyam ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಉತ್ತಮ ಹಿನ್ನಲೆ ಗಾಯನಕ್ಕಾಗಿ 6 ಬಾರಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿರುವ ಎಸ್‌ಪಿಬಿ, ಬಾಲಿವುಡ್ ಫಿಲ್ಮ್ ಫೇರ್ ಪ್ರಶಸ್ತಿ ಮತ್ತು 6 ಬಾರಿ ಫಿಲ್ಮ್ ಫೇರ್ ಪ್ರಶಸ್ತಿ (ಸೌತ್) ಪಡೆದಿದ್ದಾರೆ.  2001ರಲ್ಲಿ ಪದ್ಮ ಶ್ರೀ ಮತ್ತು 2011ರಲ್ಲಿ ಪದ್ಮ ಭೂಷಣ ಪ್ರಶಸ್ತಿ ನೀಡಿ ಇವರನ್ನು ಗೌರವಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.