ಗುರುವಾರ , ಜೂನ್ 17, 2021
23 °C

ಎಸ್‌ಪಿಬಿಗೆ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಕೆ: ನಾಳೆ ಸಾಮೂಹಿಕ ಪ್ರಾರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ವೆಂಟಿಲೇಟರ್‌ ಮತ್ತು ಇಸಿಎಂಒ(ECMO–Extracorporeal Membrane Oxygenation) ಸಾಧನ ಅಳವಡಿಸಿ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಚೆನ್ನೈನ ಎಂಜಿಎಂ ಹೆಲ್ತ್‌ಕೇರ್‌ ತಿಳಿಸಿದೆ.

‘ಎಸ್‌ಪಿಬಿ ಅವರ ಆರೋಗ್ಯದ ಮೇಲೆ ವೈದ್ಯರ ತಂಡ ತೀವ್ರ ನಿಗಾ ಇಟ್ಟಿದೆ’ ಎಂದು ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.

ಎಸ್‌ಪಿಬಿ ಅವರಿಗೆ ಆಗಸ್ಟ್ 5ರಂದು ಕೋವಿಡ್‌–19 ಸೋಂಕು ಇರುವುದು ದೃಢಪಟ್ಟಿತ್ತು. ಹಾಗಾಗಿ, ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯದಲ್ಲಿ ಆಗಸ್ಟ್ 13ರಂದು ತೀವ್ರ ಏರುಪೇರು ಕಾಣಿಸಿಕೊಂಡಿತ್ತು. ಅಂದಿನಿಂದಲೂ ಐಸಿಯುನಲ್ಲಿಯೇ ಅವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.

ನಾಳೆ ಸಾಮೂಹಿಕ ಪ್ರಾರ್ಥನೆ

ಎಸ್‌ಪಿಬಿ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ತಮಿಳು ಚಿತ್ರರಂಗದ ನಟ, ನಟಿಯರು ಆಗಸ್ಟ್‌ 20ರಂದು ಸಂಜೆ 6ಗಂಟೆಯಿಂದ 6.05ರವರೆಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದಾರೆ.

‘ಸೂಪರ್‌ ಸ್ಟಾರ್‌’ ರಜನಿಕಾಂತ್‌, ಕಮಲಹಾಸನ್‌, ಎ.ಆರ್‌. ರೆಹಮಾನ್‌, ಇಳೆಯರಾಜ, ಭಾರತಿರಾಜಾ ಸೇರಿದಂತೆ ಹಲವರು ಈ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೋವಿಡ್‌–19 ಪರಿಣಾಮ ಸಾರ್ವಜನಿಕ ಸ್ಥಳದಲ್ಲಿ ಈ ಸಾಮೂಹಿಕ ಪ್ರಾರ್ಥನೆ ನಡೆಯುತ್ತಿಲ್ಲ. ಬದಲಾಗಿ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಈ ಕಾರ್ಯಕ್ರಮದಲ್ಲಿ ಎಲ್ಲರೂ ಅವರ ಮನೆಗಳಲ್ಲಿಯೇ ಪಾಲ್ಗೊಳ್ಳಬೇಕು ಎಂದು ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣದಲ್ಲಿ ಕೋರಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು